Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:16 - ಕನ್ನಡ ಸತ್ಯವೇದವು J.V. (BSI)

16 ಯೆಹೋವನು ನುಡಿದದ್ದನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕೆ ಹಿಂದೆಗೆಯದೆ ಹೋದದ್ದರಿಂದ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ವಧಿಸಲು ಸಿದ್ಧನಾಗಿದ್ದೆ. ಆದ್ದರಿಂದ ನಾನು ನಿನಗೆ ಈ ವಾಗ್ದಾನವನ್ನು ಮಾಡುತ್ತೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನೀನು ಈ ಕಾರ್ಯವನ್ನು ಮಾಡಿ, ನಿನ್ನ ಒಬ್ಬನೇ ಮಗನನ್ನು ಸಹ ನನಗೆ ಕೊಡುವುದಕ್ಕೆ ಹಿಂಜರಿಯದೆ ಇದ್ದುದರಿಂದ, ಯೆಹೋವ ದೇವರಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:16
22 ತಿಳಿವುಗಳ ಹೋಲಿಕೆ  

ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.


ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು - ಖಂಡಿತವಾಗಿ ನಾನು ನಿನ್ನನ್ನು ವಿುಡಿತೆಗಳಷ್ಟು ಅಸಂಖ್ಯಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಆರ್ಭಟಿಸುವರು.


ಬೊಚ್ರವು ಹಾಳುಬಿದ್ದು ಬೆರಗಿಗೂ ನಿಂದೆಗೂ ಶಾಪಕ್ಕೂ ಗುರಿಯಾಗಿ ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶನವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.


ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಸೇನಾಧೀಶ್ವರದೇವರಾದ ಯೆಹೋವನ ನುಡಿಯನ್ನು ಕೇಳಿರಿ - ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗಂದಿದ್ದಾನೆ - ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು ಅದರ ಸೌಧಗಳನ್ನು ಹಗೆಮಾಡುತ್ತೇನೆ; ಆದದರಿಂದ ನಾನು ರಾಜಧಾನಿಯನ್ನೂ ಅದರ ಸಕಲಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು,


ಆಗಲಾತನು - ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು ಅಂದನು.


ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.


ಯೆಹೋವನ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ -


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು.


ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಷ್ಟಾಗಿ ಮಾಡಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಅಂದನು.


ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮ ಇಸಾಕ ಯಾಕೋಬರಿಗೆ ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡು


ಯಾಹುವಿನ ಸಿಂಹಾಸನದ ಆಣೆ, ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಕ್ಕೂ ಯುದ್ಧವಿರುವದು ಅಂದನು.


ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.


ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.


ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ. ಇದು ಯೆಹೋವನ ನುಡಿ.


ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ - ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನಿರನು ಎಂಬದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು