Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:18 - ಕನ್ನಡ ಸತ್ಯವೇದವು J.V. (BSI)

18 ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀನು ನನಗೆ ವಿಧೇಯನಾದದ್ದರಿಂದ ನಿನ್ನ ಸಂತತಿಗಳವರ ಮೂಲಕವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜನಾಂಗವೂ ಆಶೀರ್ವಾದ ಹೊಂದುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:18
22 ತಿಳಿವುಗಳ ಹೋಲಿಕೆ  

ನೀವು ಪ್ರವಾದಿಗಳ ಶಿಷ್ಯರೂ ದೇವರು ನಮ್ಮ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ - ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.


ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.


ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.


ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ.


ಅವನಿಂದ ಬಲಿಷ್ಠವಾದ ಮಹಾಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂವಿುಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವದಲ್ಲಾ;


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದದ್ದು. ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ,


ಆ ಬಾಧ್ಯತೆಯು ಕರ್ಮಮಾರ್ಗದಿಂದ ದೊರೆಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯುವದಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಆದರೆ ತನ್ನ ಮಗನನ್ನು ವಧಿಸುವದಕ್ಕೆ ಅವನು


ಬೆಳಿಗ್ಗೆ ಅಬ್ರಹಾಮನು ಎದ್ದು ಕತ್ತೆಗೆ ತಡಿಹಾಕಿಸಿ ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡಿಸಿ ತನ್ನ ಸೇವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಯೇಸು ಕ್ರಿಸ್ತನ ವಂಶಾವಳಿಯು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.


ನಿನ್ನ ಸಂತತಿಯು ಭೂವಿುಯ ಧೂಳಿನಂತೆ ಅಸಂಖ್ಯವಾಗುವದು; ನೀನು ಪೂರ್ವಪಶ್ಚಿಮದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನ ಮೂಲಕವೂ ನಿನ್ನ ಸಂತತಿಯ ಮೂಲಕವೂ ಭೂವಿುಯ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು.


ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಯೆಹೋವನ ಆಜ್ಞೆಯಂತೆಯೇ ಮೋಶೆ ಆರೋನರು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು