Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:2 - ಕನ್ನಡ ಸತ್ಯವೇದವು J.V. (BSI)

2 ಆಗಲಾತನು - ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ದೇವರು, “ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂ ಆದ ಇಸಾಕನನ್ನು ಕರೆದುಕೊಂಡು ಮೊರೀಯ ಪ್ರಾಂತಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ದೇವರು ಅವನಿಗೆ, “ನಿನಗೆ ಪ್ರಿಯನಾಗಿರುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಮೊರೀಯ ದೇಶಕ್ಕೆ ಕರೆದುಕೊಂಡು ಹೋಗು. ನಾನು ನಿನಗೆ ತಿಳಿಸುವ ಬೆಟ್ಟದ ಮೇಲೆ ಅವನನ್ನು ಯಜ್ಞವನ್ನಾಗಿ ಅರ್ಪಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದೇವರು, “ನೀನು ಪ್ರೀತಿ ಮಾಡುವ ನಿನ್ನ ಒಬ್ಬನೇ ಮಗ ಇಸಾಕನನ್ನು ಈಗ ತೆಗೆದುಕೊಂಡು, ಮೊರೀಯಾ ದೇಶಕ್ಕೆ ಹೋಗಿ, ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:2
18 ತಿಳಿವುಗಳ ಹೋಲಿಕೆ  

ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ಅಬ್ರಹಾಮನು ಪರಿಶೋಧಿತನಾಗಿ ನಂಬಿಕೆಯಿಂದಲೇ ಇಸಾಕನನ್ನು ಸಮರ್ಪಿಸಿದನು. ಇಸಾಕನು ಅವನ ಏಕಪುತ್ರನಾಗಿದ್ದರೂ ಮತ್ತು ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರೆಂದು ದೇವರು ಅವನಿಗೆ ಹೇಳಿದ್ದರೂ ಆ ವಾಗ್ದಾನಗಳನ್ನು ಹೊಂದಿದ ಅವನು ಆ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕಿದ್ದನು.


ಯೆಹೋವನು ನುಡಿದದ್ದನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕೆ ಹಿಂದೆಗೆಯದೆ ಹೋದದ್ದರಿಂದ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು;


ಹಾಗಲ್ಲ, ನಿನ್ನ ಪತ್ನಿಯಾದ ಸಾರಳಲ್ಲಿಯೇ ನಿನ್ನಿಂದ ಮಗನು ಹುಟ್ಟುವನು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರಬೇಕು.


ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲ್ಯರ ಮೇಲೆ ಕೋಪೋದ್ರೇಕವುಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.


ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.


ಸೊಲೊಮೋನನು ಯೆರೂಸಲೇಮ್ ಪಟ್ಟಣದೊಳಗೆ ತನ್ನ ತಂದೆಯಾದ ದಾವೀದನಿಗೆ ದೇವದರ್ಶನವುಂಟಾದ ಮೋರೀಯಾ ಗುಡ್ಡದಲ್ಲಿ ಯೆಹೋವನ ಆಲಯವನ್ನು ಕಟ್ಟಿಸ ತೊಡಗಿದನು. ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.


ಎರಡು ತಿಂಗಳು ಕಳೆದನಂತರ ಆಕೆಯು ತಿರಿಗಿ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.


ನಾನು ಸುರಕ್ಷಿತನಾಗಿ ಮನೆಗೆ ಮುಟ್ಟಿದಾಗ ನನ್ನನ್ನು ಎದುರುಗೊಳ್ಳುವದಕ್ಕಾಗಿ ನನ್ನ ಮನೆಯ ಬಾಗಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಹೋಮಮಾಡುವೆನು ಎಂದು ಹರಕೆಮಾಡಿದನು.


ಆದರೆ ದೇವರು ಅವನಿಗೆ - ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ಕರಕರೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;


ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ.


ಸಾವಿರಾರು ಟಗರುಗಳನ್ನೂ ಲಕ್ಷೋಪಲಕ್ಷ ತೈಲಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚಾನೇ? ನನ್ನ ದ್ರೋಹದ ನಿವಿುತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ, ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?


ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಮಾಡಿ ಅದರ ಮೇಲೆ ಶುದ್ಧವಾದ ಎಲ್ಲಾ ಪಶುಪಕ್ಷಿಜಾತಿಗಳಲ್ಲಿ ಸರ್ವಾಂಗಹೋಮ ಮಾಡಿದನು.


ಬೆಳಿಗ್ಗೆ ಅಬ್ರಹಾಮನು ಎದ್ದು ಕತ್ತೆಗೆ ತಡಿಹಾಕಿಸಿ ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡಿಸಿ ತನ್ನ ಸೇವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ ಕಟ್ಟಿಗೆಯನ್ನು ಒಟ್ಟಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಬಿಗಿದು ಅವನನ್ನು ವೇದಿಯಲ್ಲಿ ಕಟ್ಟಿಗೆಯ ಮೇಲೆ ಇಟ್ಟನು.


ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು