Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:8 - ಕನ್ನಡ ಸತ್ಯವೇದವು J.V. (BSI)

8 ಮಗನೇ, ಹೋಮಕ್ಕೆ ಬೇಕಾದ ಕುರಿಯನ್ನು ದೇವರೇ ಒದಗಿಸುವನು ಅಂದನು. ಹೀಗೆ ಅವರಿಬ್ಬರೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಅಬ್ರಹಾಮನು, “ಬಲಿಗೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುತ್ತಾರೆ, ಮಗನೇ,” ಎಂದು ಉತ್ತರಕೊಟ್ಟ. ಅವರಿಬ್ಬರೂ ಹಾಗೇ ಮುಂದಕ್ಕೆ ಸಾಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಬ್ರಹಾಮನು, “ಮಗನೇ, ಯಜ್ಞಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದು ಹೇಳಿದನು. ಹೀಗೆ ಅಬ್ರಹಾಮನು ಮತ್ತು ಅವನ ಮಗನು ಆ ಸ್ಥಳಕ್ಕೆ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಬ್ರಹಾಮನು, “ನನ್ನ ಮಗನೇ, ದೇವರೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿಸುವರು,” ಎಂದು ಉತ್ತರಕೊಟ್ಟನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:8
14 ತಿಳಿವುಗಳ ಹೋಲಿಕೆ  

ಅಗೋ ಯಜ್ಞಕ್ಕೆ ದೇವರು ನೇವಿುಸಿದ ಕುರಿ ಅಂದನು.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಅವರ ಸ್ವರವು ನನಗೆ ಕೇಳಿಸಿತು; ಅವರು ಮಹಾ ಶಬ್ದದಿಂದ - ವಧಿತನಾದ ಕುರಿಯಾದಾತನು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನ ಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಹೇಳಿದರು.


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರುಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು ಎಂದು ಹೇಳಿದನು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಅಂದನು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿ ಕೊಯ್ಯಲ್ಪಟ್ಟದ್ದಾಗಿ ನಿಂತಿರುವದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಏನಂದರೆ ಭೂವಿುಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು.


ಅಮಚ್ಯನು ದೇವರ ಮನುಷ್ಯನನ್ನು - ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ಮಾಡುವದೇನು ಎಂದು ಕೇಳಲು ಅವನು ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು ಅಂದನು.


ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ - ಅಪ್ಪಾ ಎಂದು ಕರೆಯಲು ಅಬ್ರಹಾಮನು - ಏನು ಮಗನೇ ಅಂದನು. ಇಸಾಕನು - ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ ಎಂದು ಕೇಳಿದ್ದಕ್ಕೆ ಅಬ್ರಹಾಮನು -


ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ ಕಟ್ಟಿಗೆಯನ್ನು ಒಟ್ಟಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಬಿಗಿದು ಅವನನ್ನು ವೇದಿಯಲ್ಲಿ ಕಟ್ಟಿಗೆಯ ಮೇಲೆ ಇಟ್ಟನು.


ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ.


ಎಲೀಯನು ತಿರಿಗಿ ಅವನಿಗೆ - ದಯವಿಟ್ಟು ನೀನು ಇಲ್ಲೇ ಇರು; ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಎಂದು ಹೇಳಿದನು. ಆಗ ಅವನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲ ಎಂದು ಉತ್ತರಕೊಟ್ಟನು; ಆದದರಿಂದ ಇಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು