Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:15 - ಕನ್ನಡ ಸತ್ಯವೇದವು J.V. (BSI)

15 ನಾನೂರು ರೂಪಾಯಿ ಬಾಳುವ ಭೂವಿುಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಸ್ವಾಮೀ, ನನ್ನ ಮಾತನ್ನು ಕೇಳು. ಆ ಸ್ಥಳದ ಬೆಲೆ ನಾನೂರು ಬೆಳ್ಳಿ ರೂಪಾಯಿಗಳಷ್ಟೇ. ಆದರೆ ನಿನಗಾಗಲಿ, ನನಗಾಗಲಿ ಆ ನಾನೂರು ರೂಪಾಯಿ ಹೆಚ್ಚೇನೂ ಅಲ್ಲ. ಸ್ಥಳವನ್ನು ತೆಗೆದುಕೊಂಡು ನಿನ್ನ ಹೆಂಡತಿಯನ್ನು ಸಮಾಧಿಮಾಡು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನನ್ನ ಒಡೆಯನೇ, ನನ್ನ ಮಾತನ್ನು ಕೇಳು. ಆ ಭೂಮಿಯು ನಾನೂರು ಬೆಳ್ಳಿಯ ನಾಣ್ಯಗಳ ಬೆಲೆಯುಳ್ಳದ್ದು, ಈ ಕುರಿತು ನಮ್ಮೊಳಗೇ ವಾದವೇಕೆ? ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:15
6 ತಿಳಿವುಗಳ ಹೋಲಿಕೆ  

ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು [ಅಥವಾ] ಹದಿನೈದು ತೊಲೆಯ ತೂಕದ್ದಾಗಿರಲಿ.


ಪ್ರಾಣರಕ್ಷಣೆಯ ಕಪ್ಪವನ್ನು ಯೆಹೋವನಿಗೆ ಕೊಡುವದರಲ್ಲಿ ಐಶ್ವರ್ಯವಂತರು ಅರ್ಧ ರೂಪಾಯಿಗಿಂತ ಹೆಚ್ಚು ಕೊಡಬಾರದು, ಬಡವರು ಕಮ್ಮಿಕೊಡಬಾರದು.


ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿಯೊಬ್ಬನು ಯೆಹೋವನಿಗೆ ಅರ್ಧ ರೂಪಾಯಿಯ ಮೇರೆಗೆ ಕಪ್ಪ ಕೊಡಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧರ್ಧ ರೂಪಾಯಿ ಕಪ್ಪವಾಗಿ ಕೊಡಬೇಕು.


ಅದಕ್ಕೆ ಎಫ್ರೋನನು - ಸ್ವಾಮೀ, ನನ್ನ ಮಾತನ್ನು ಲಾಲಿಸು;


ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂವಿುಯನ್ನು ಹಮೋರನ ಮಕ್ಕಳಿಗೆ ನೂರು ವರಹಾ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.


ಬೆಳ್ಳಿ ಸಿಕ್ಕುವ ಗಣಿಯೂ ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು