Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:20 - ಕನ್ನಡ ಸತ್ಯವೇದವು J.V. (BSI)

20 ಹಿತ್ತಿಯರು ಆ ಭೂವಿುಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಶ್ಮಶಾನಭೂವಿುಯಾಗುವದಕ್ಕೆ ಅಬ್ರಹಾಮನಿಗೆ ಕೊಟ್ಟು ನಿರ್ಣಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ಅಬ್ರಹಾಮನಿಗೆ ಸ್ವಂತ ಸ್ಮಶಾನಭೂಮಿಯಾಗಲೆಂದು ಸ್ವಾಧೀನಗೊಳಿಸಿದವರು ಆ ಹಿತ್ತಿಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಬ್ರಹಾಮನು ಆ ಜಮೀನನ್ನು ಮತ್ತು ಅದರಲ್ಲಿದ್ದ ಗವಿಯನ್ನು ಹಿತ್ತಿಯರಿಂದ ಕೊಂಡುಕೊಂಡನು. ಅದು ಅವನ ಆಸ್ತಿಯಾಯಿತು. ಅವನು ಅದನ್ನು ಸಮಾಧಿ ಸ್ಥಳವನ್ನಾಗಿ ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಅಬ್ರಹಾಮನಿಗೆ ಸ್ವಂತ ಸಮಾಧಿ ಎಂದು ಸ್ಥಿರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:20
14 ತಿಳಿವುಗಳ ಹೋಲಿಕೆ  

ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.


ಅರಸನು ಅರೌನನಿಗೆ - ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಸುಮ್ಮನೆ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ರೂಪಾಯಿಗೆ ಕೊಂಡುಕೊಂಡು


ಅವನ ಶವವನ್ನು ಕಾನಾನ್‍ದೇಶಕ್ಕೆ ಹೊತ್ತುಕೊಂಡುಹೋಗಿ ಮಕ್ಪೇಲ ಎಂಬ ಬೈಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂವಿುಸಹಿತ ಸ್ವಕೀಯ ಶ್ಮಶಾನಭೂವಿುಯಾಗುವದಕ್ಕೆ ಕೊಂಡುಕೊಂಡಿದ್ದನು.


ಅವನ ಮಕ್ಕಳಾದ ಇಸಾಕ್ ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂವಿುಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನಿಗೆ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿರುವದು;


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.


ನಾನು ನಿಮ್ಮಲ್ಲಿ ಪರದೇಶದವನೂ ಪರವಾಸಿಯೂ ಆಗಿದ್ದೇನಷ್ಟೆ. ತೀರಿಹೋಗಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ನಿಮ್ಮಲ್ಲಿ ನನ್ನ ಸ್ವಂತಕ್ಕೆ ಭೂವಿುಯನ್ನು ಕೊಡಬೇಕೆಂದು ಕೇಳಿಕೊಂಡನು.


ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್‍ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂವಿುಯಲ್ಲಿರುವ ಗವಿಯೊಳಗೆ ಹೂಣಿಟ್ಟನು.


ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು; ಅದರಲ್ಲಿ ಅಬ್ರಹಾಮನಿಗೂ ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.


ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ - ನಾನು ನನ್ನ ಪಿತೃಗಳ ಬಳಿಗೆ ಸೇರಬೇಕಾದ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂವಿುಯಲ್ಲಿರುವ ಗವಿಯೊಳಗೆ ನನಗೆ ಪಿತೃಗಳ ಬಳಿಯಲ್ಲಿ ಸಮಾಧಿಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು