Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:4 - ಕನ್ನಡ ಸತ್ಯವೇದವು J.V. (BSI)

4 ನಾನು ನಿಮ್ಮಲ್ಲಿ ಪರದೇಶದವನೂ ಪರವಾಸಿಯೂ ಆಗಿದ್ದೇನಷ್ಟೆ. ತೀರಿಹೋಗಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ನಿಮ್ಮಲ್ಲಿ ನನ್ನ ಸ್ವಂತಕ್ಕೆ ಭೂವಿುಯನ್ನು ಕೊಡಬೇಕೆಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಾನು ನಿಮ್ಮೊಂದಿಗೆ ಪರದೇಶಸ್ಥನೂ, ಪರವಾಸಿಯೂ ಆಗಿದ್ದೇನೆ. ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ. ಆಗ ನನ್ನ ಹೆಂಡತಿಯ ಶವವನ್ನು ಹೂಳಿಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:4
21 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಅವನು ವಾಗ್ದಾತ್ತದೇಶಕ್ಕೆ ಬಂದಾಗ ಅಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಡೇರೆಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ ನಮ್ಮ ಪಿತೃಗಳೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ, ನಮ್ಮ ಆಯುಷ್ಕಾಲವು ನೆರಳಿನಂತಿದೆ; ನಮಗೆ ಯಾವ ನಿರೀಕ್ಷೆಯೂ ಇಲ್ಲ.


ನೀನು ಪ್ರವಾಸವಾಗಿರುವ ಕಾನಾನ್‍ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟು ಅವರಿಗೆ ದೇವರಾಗಿರುವೆನು ಅಂದನು.


ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ; ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.


ಇದರಲ್ಲಿ ಅವನಿಗೆ ಕಾಲಿಡುವಷ್ಟು ಭೂವಿುಯನ್ನು ಸ್ವಾಸ್ತ್ಯವಾಗಿ ಕೊಡದೆ ಅವನಿಗೆ ಮಕ್ಕಳು ಇನ್ನೂ ಇಲ್ಲದಿರುವಾಗ - ಈ ದೇಶವನ್ನು ನಿನಗೂ ನಿನ್ನ ಹಿಂದೆ ಬರುವ ನಿನ್ನ ಸಂತತಿಗೂ ಸ್ವಾಸ್ತ್ಯವಾಗಿ ಕೊಡುವೆನು ಎಂದು ಅವನಿಗೆ ವಾಗ್ದಾನ ಮಾಡಿದನು.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ ಪರದೇಶದವನೂ ಆಗಿದ್ದೇನಲ್ಲಾ.


ಭೂವಿುಯನ್ನು ಶಾಶ್ವತವಾಗಿ ವಿಕ್ರಯಿಸಿಬಿಡಬಾರದು. ಯಾಕಂದರೆ ಆ ಭೂವಿು ನನ್ನದು; ನೀವಾದರೋ ಪರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳುಕೊಂಡವರೇ.


ಆ ಗವಿಯು ಕಾನಾನ್‍ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬೈಲಿನಲ್ಲಿ ಅದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂವಿುಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಕೀಯ ಶ್ಮಶಾನಭೂವಿುಯಾಗುವದಕ್ಕೆ ಕೊಂಡುಕೊಂಡನು.


ಪ್ರಿಯರೇ, ಪ್ರವಾಸಿಗಳೂ ಪರದೇಶಸ್ಥರೂ ಆಗಿರುವ ನೀವು ನಿಮ್ಮ ಆತ್ಮದ ಮೇಲೆ ಯುದ್ಧಮಾಡುವ ಶಾರೀರಿಕ ಅಭಿಲಾಷೆಗಳಿಗೆ ದೂರವಾಗಿರಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.


ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ಇದಲ್ಲದೆ ಆ ದಿನಗಳಲ್ಲಿ ದಿನ್ನೆ ಕಂಡರೆ ಭಯ, ದಾರಿಯಲ್ಲಿ ಅಪಾಯ; ಬಾದಾವಿುಯ ಮರವು ಹೂಬಿಡುವದು; ವಿುಡತೆಯು ಕೂಡ ಭಾರವಾಗುವದು; ಆಶೆಯು ಕುಂದುವದು, ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವದಕ್ಕಿದ್ದಾನಲ್ಲಾ; ಗೋಳಾಟದವರು ಬೀದಿಯಲ್ಲಿ ತಿರುಗುವರು.


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹು ವರುಷ ಬದುಕಿದವನಿಗೆ ಸುಖ ತೃಪ್ತಿಯೂ ಉತ್ತರಕ್ರಿಯೆಯೂ ಇಲ್ಲದಿದ್ದರೆ ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ ಸಮಸ್ತಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ಅವನ ಶವವನ್ನು ಕಾನಾನ್‍ದೇಶಕ್ಕೆ ಹೊತ್ತುಕೊಂಡುಹೋಗಿ ಮಕ್ಪೇಲ ಎಂಬ ಬೈಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂವಿುಸಹಿತ ಸ್ವಕೀಯ ಶ್ಮಶಾನಭೂವಿುಯಾಗುವದಕ್ಕೆ ಕೊಂಡುಕೊಂಡಿದ್ದನು.


ಯಾಕೋಬನು - ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ; ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇತ್ತು; ನನ್ನ ಪಿತೃಗಳು ಲೋಕಯಾತ್ರೆ ಮಾಡಿದಷ್ಟು ವರುಷಗಳು ನನಗಾಗಿಲ್ಲ ಎಂದು ಹೇಳಿ


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಅವರನ್ನು ಶೇಕೆವಿುಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.


ಹಿತ್ತಿಯರು ಅವನಿಗೆ - ಸ್ವಾಮೀ, ನಮ್ಮ ಮಾತನ್ನು ಕೇಳು; ನೀನು ನಮಗೆ ಮಹಾಪ್ರಭುವಾಗಿದ್ದೀಯಷ್ಟೆ. ತೀರಿಹೋದ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಗಳೊಳಗೆ ಶ್ರೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವದಕ್ಕೆ ನಮ್ಮೊಳಗೆ ಒಬ್ಬನಾದರೂ ತನಗಿರುವ ಶ್ಮಶಾನ ಭೂವಿುಯನ್ನು ಕೊಡುವದಕ್ಕೆ ಹಿಂದೆಗೆಯುವದಿಲ್ಲವೆಂದು ಉತ್ತರ ಕೊಡಲು ಅಬ್ರಹಾಮನು ಎದ್ದು ಹಿತ್ತಿಯರಾಗಿದ್ದ


ಆಕೆ ಗಂಡು ಮಗುವನ್ನು ಹೆರಲು, ಮೋಶೆ - ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ ಎಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು