Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:12 - ಕನ್ನಡ ಸತ್ಯವೇದವು J.V. (BSI)

12 ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಅನುಕೂಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಬೇಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಈ ದಿನ ನಾನು ಬಂದ ಕಾರ್ಯವನ್ನು ಕೈಗೂಡಿಸಿ, ನನ್ನೊಡೆಯ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಪ್ರಾರ್ಥಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರೇ, ಈ ಹೊತ್ತು ನನಗೆ ಅನುಕೂಲವನ್ನು ಉಂಟುಮಾಡಿ, ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:12
29 ತಿಳಿವುಗಳ ಹೋಲಿಕೆ  

ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೀಟಾದ ದಾರಿಯಿಂದಲೇ ಕರಕೊಂಡು ಬಂದಿದ್ದಾನೆ ಅಂದನು.


ಎಲೀಯನ ದೇವರಾದ ಯೆಹೋವನೆಲ್ಲಿ ಅಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು; ಅವನು ದಾಟಿಹೋದನು.


ದೇವರು ಮೋಶೆಗೆ ಮತ್ತೂ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು. ಇದು ಸದಾಕಾಲಕ್ಕೂ ನನ್ನ ಹೆಸರು; ಇದು ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಬಳಿಯಲ್ಲಿದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿವಿುತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಎಂದು ಹೇಳಲಾಗಿ


ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ಬೊಗ್ಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ನೀಟಾದ ದಾರಿಯಲ್ಲಿ ಕರೆದುಕೊಂಡು ಬಂದದ್ದಕ್ಕಾಗಿ ಆತನನ್ನು ಕೊಂಡಾಡಿದೆನು.


ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ - ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾದರೆ ನೀರಿಗೆ ಬರುವ ಯಾವ ಹುಡುಗಿಗೆ -


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.


ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ದೇವರು ನಿಮಗೆ ನುಡಿದದ್ದನ್ನು ನೀವು ಓದಲಿಲ್ಲವೇ. ಆತನು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ ಎಂದು ಹೇಳಿದನು.


ನಿನ್ನ ಎಲ್ಲಾ ನಡವಳಿಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ಯೆಹೋವನು ಮನೇ ಕಟ್ಟದಿದ್ದರೆ ಅದನ್ನು ಕಟ್ಟುವವರು ಕಷ್ಟಪಡುವದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ ಕಾವಲುಗಾರರು ಅದನ್ನು ಕಾಯುವದು ವ್ಯರ್ಥ.


ಯೆರೂಸಲೇವಿುನ ಶುಭಕ್ಕೋಸ್ಕರ ಪ್ರಾರ್ಥಿಸಿರಿ. [ಯೆರೂಸಲೇಮೇ,] ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.


ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು.


ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.


ಆಗ ಅರಸನು ನನ್ನನ್ನು - ನಿನ್ನ ಅಪೇಕ್ಷೆಯೇನು ಎಂದು ಕೇಳಿದನು. ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ ಅರಸನಿಗೆ - ರಾಜರ ಚಿತ್ತವಿರುವದಾದರೆ ಮತ್ತು


ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ವೇದಿಯ ಹತ್ತಿರ ಬಂದು - ಅಬ್ರಹಾಮ್ ಇಸಾಕ್ ಇಸ್ರಾಯೇಲ್ಯರ ದೇವರೇ, ಯೆಹೋವನೇ, ನೀನೋಬ್ಬನೇ ಇಸ್ರಾಯೇಲ್ಯರ ದೇವರಾಗಿರುತ್ತೀ ಎಂಬದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆಂಬದನ್ನೂ ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬದನ್ನೂ ಈಹೊತ್ತು ತೋರಿಸಿ ಕೊಡು.


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿ ಬಿಡುವಂತೆ ಸರ್ವಶಕ್ತನಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳಕೊಂಡವನಾಗಬೇಕಾದರೆ ಹಾಗೆಯೇ ಆಗಲಿ ಎಂದು ಹೇಳಿದನು.


ಇದಲ್ಲದೆ ಅವನು ದೇವರನ್ನು ಪ್ರಾರ್ಥಿಸಿ - ಯೆಹೋವನೇ, ನನ್ನ ತಂದೆತಾತಂದಿರಾದ ಇಸಾಕ ಅಬ್ರಹಾಮರ ದೇವರೇ, ಸ್ವದೇಶಕ್ಕೆ ಬಂಧುಗಳ ಬಳಿಗೆ ತಿರಿಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೇದನ್ನು ಮಾಡುವೆನೆಂದು ನನಗೆ ವಾಗ್ದಾನ ಮಾಡಿದವನು ನೀನೇ ಅಲ್ಲವೇ.


ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.


ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಏನು ಮಗನೇ, ಇಷ್ಟು ಬೇಗ ಹೇಗೆ ಸಿಕ್ಕಿತು ಎಂದು ಕೇಳಿದ್ದಕ್ಕೆ ಅವನು - ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು ಅಂದನು. ಇಸಾಕನು ಅವನಿಗೆ -


ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು ಅಂದಳು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ - ಯೆಹೋವನು ನನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವದಕ್ಕಾಗಿ ಕಾದುಕೊಂಡಿದ್ದನು.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಪಾತ್ರನಾಗಿದ್ದೇನೆ. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಪಾಳೆಯಗಳಿಗೆ ಒಡೆಯನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು