Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:21 - ಕನ್ನಡ ಸತ್ಯವೇದವು J.V. (BSI)

21 ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ - ಯೆಹೋವನು ನನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವದಕ್ಕಾಗಿ ಕಾದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ಮನುಷ್ಯ, ತನ್ನ ಪ್ರಯಾಣವನ್ನು ಸರ್ವೇಶ್ವರ ಸಫಲಗೊಳಿಸಿದರೋ ಇಲ್ಲವೋ ಎಂದು ಯೋಚಿಸುತ್ತಾ ಏನೂ ಮಾತಾಡದೆ ಆಕೆಯನ್ನೇ ದೃಷ್ಟಿಸಿ ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಸೇವಕನು ಆಕೆಯನ್ನೇ ಗಮನಿಸುತ್ತಾ, ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯೆಹೋವ ದೇವರು ತನ್ನ ಪ್ರಯಾಣನ್ನು ಸಫಲ ಮಾಡಿದರೋ ಏನೋ, ಎಂದು ತಿಳಿದುಕೊಳ್ಳುವುದಕ್ಕೆ ಆ ಮನುಷ್ಯನು ಆಕೆಯನ್ನು ಗಮನಿಸುತ್ತಾ, ಆಶ್ಚರ್ಯಪಟ್ಟು ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:21
13 ತಿಳಿವುಗಳ ಹೋಲಿಕೆ  

ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.


ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಅನುಕೂಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಬೇಡುತ್ತೇನೆ.


ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.


ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಯೋಚಿಸುತ್ತಿದ್ದಳು.


ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡಿಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.


ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡಿಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವದು.


ಅವನು ಅವರಿಗೆ - ಯೆಹೋವನು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾನೆ; ಆದದರಿಂದ ನನ್ನನ್ನು ತಡೆಯಬೇಡಿರಿ; ನನ್ನ ದಣಿಯ ಬಳಿಗೆ ಹೋಗುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಹೇಳಲು


ಕೊಡದಲ್ಲಿದ್ದ ನೀರನ್ನು ದೋಣಿಯೊಳಗೆ ಹೊಯಿದು ತಿರಿಗಿ ತರುವದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ತಂದು ಕೊಟ್ಟಳು.


ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೀಟಾದ ದಾರಿಯಿಂದಲೇ ಕರಕೊಂಡು ಬಂದಿದ್ದಾನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು