ಆದಿಕಾಂಡ 24:27 - ಕನ್ನಡ ಸತ್ಯವೇದವು J.V. (BSI)27 ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೀಟಾದ ದಾರಿಯಿಂದಲೇ ಕರಕೊಂಡು ಬಂದಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇದಲ್ಲದೆ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ. ಅವರು ನನ್ನ ಯಜಮಾನನನ್ನು ಕೈಬಿಡದೆ, ತಮ್ಮ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಿದ್ದಾರೆ. ನಾನು ಮಾರ್ಗದಲ್ಲಿರುವಾಗ ಯೆಹೋವ ದೇವರು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೇ ನಡೆಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |