Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:29 - ಕನ್ನಡ ಸತ್ಯವೇದವು J.V. (BSI)

29 ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ರೆಬೆಕ್ಕಳಿಗೆ ಲಾಬಾನ್‍ ಎಂಬ ಅಣ್ಣ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29-30 ರೆಬೆಕ್ಕಳಿಗೆ ಒಬ್ಬ ಅಣ್ಣನಿದ್ದನು. ಅವನ ಹೆಸರು ಲಾಬಾನ. ನಡೆದ ಸಂಗತಿಗಳನ್ನೆಲ್ಲ ರೆಬೆಕ್ಕಳು ಅವನಿಗೆ ತಿಳಿಸಿದಳು. ಲಾಬಾನನು ಆಕೆಯ ಮಾತುಗಳನ್ನೆಲ್ಲ ಕೇಳಿದಾಗ ಮತ್ತು ಉಂಗುರವನ್ನು ಮತ್ತು ಕೈಗಳಲ್ಲಿದ್ದ ಬಳೆಗಳನ್ನು ಕಂಡಾಗ ಬಾವಿಯ ಬಳಿಗೆ ಓಡಿಹೋದನು. ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ಆ ಸೇವಕನು ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:29
8 ತಿಳಿವುಗಳ ಹೋಲಿಕೆ  

ಅವನು ಅವರನ್ನು - ನಾಹೋರನ ಮಗನಾದ ಲಾಬಾನನನ್ನು ಬಲ್ಲಿರಾ ಎಂದು ಕೇಳಿದ್ದಕ್ಕೆ - ಬಲ್ಲೆವು ಅಂದರು.


ಲಾಬಾನನು ತನ್ನ ಸೋದರಳಿಯನು ಬಂದ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರಕೊಂಡು ಬಂದನು. ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು


ರೆಬೆಕ್ಕಳ ಅಣ್ಣನೂ ತಾಯಿಯೂ ಅವನಿಗೆ -ಹುಡುಗಿಯು ಇನ್ನು ಎಂಟು ಹತ್ತು ದಿನವಾದರೂ ನಮ್ಮಲ್ಲಿರಲಿ; ಆಮೇಲೆ ಆಕೆ ಹೋಗಬಹುದು ಎಂದು ಹೇಳಿದರು.


ಮತ್ತು ರೆಬೆಕ್ಕಳಿಗೆ - ತಂಗಿಯೇ, ನಿನ್ನಿಂದ ಲಕ್ಷಾಂತರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿ ಎಂದು ಹೇಳಿ ಹರಸಿದರು.


ಅವನು ತನ್ನ ತಂಗಿಯ ಮೇಲೆ ಇದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿ ಆ ಮನುಷ್ಯನು ನನ್ನ ಸಂಗಡ ಹೀಗೆ ಹೀಗೆ ಮಾತಾಡಿದನೆಂದು ತಂಗಿ ಹೇಳಿದ ಮಾತನ್ನು ಕೇಳಿ ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.


ಇಸಾಕನು ನಾಲ್ವತ್ತು ವರುಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳಾಗಿಯೂ ಅರಾಮ್ಯನಾದ ಲಾಬಾನನ ತಂಗಿಯಾಗಿಯೂ ಇದ್ದ ರೆಬೆಕ್ಕಳನ್ನು ಪದ್ದನ್ ಅರಾವಿುನಿಂದ ತರಿಸಿ ಹೆಂಡತಿಯಾಗಿ ಮಾಡಿಕೊಂಡನು.


ಆದದರಿಂದ ಮಗನೇ, ನನ್ನ ಮಾತನ್ನು ಕೇಳು; ನೀನು ಎದ್ದು ಖಾರಾನ್ ಊರಿನಲ್ಲಿರುವ ನನ್ನಣ್ಣನಾದ ಲಾಬಾನನ ಬಳಿಗೆ ಓಡಿಹೋಗಿ ಕೆಲವು ಕಾಲ,


ಪದ್ದನ್ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟುಹೋಗಿ ಅಲ್ಲಿ ನಿನ್ನ ಸೋದರ ಮಾವನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೋ ಎಂದು ಅಪ್ಪಣೆಕೊಟ್ಟು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು