Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:30 - ಕನ್ನಡ ಸತ್ಯವೇದವು J.V. (BSI)

30 ಅವನು ತನ್ನ ತಂಗಿಯ ಮೇಲೆ ಇದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿ ಆ ಮನುಷ್ಯನು ನನ್ನ ಸಂಗಡ ಹೀಗೆ ಹೀಗೆ ಮಾತಾಡಿದನೆಂದು ತಂಗಿ ಹೇಳಿದ ಮಾತನ್ನು ಕೇಳಿ ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ತನ್ನ ತಂಗಿಯ ಬಳಿ ಇದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿ, ಆ ಮನುಷ್ಯನು ನನ್ನ ಸಂಗಡ ಹೇಗೆ ಮಾತನಾಡಿದನೆಂದು ರೆಬೆಕ್ಕಳು ಹೇಳಿದ ಮಾತುಗಳನ್ನು ಕೇಳಿ, ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವನು ತನ್ನ ತಂಗಿಯ ಮೇಲಿದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿದನು. ಆ ಮನುಷ್ಯ ಆಕೆಗೆ ಹೇಳಿದ ಮಾತುಗಳನ್ನು ಆಕೆಯಿಂದಲೇ ಕೇಳಿ ತಿಳಿದುಕೊಂಡನು. ಬಳಿಕ ಬುಗ್ಗೆಯ ಬಳಿ ಒಂಟೆಗಳೊಂದಿಗೆ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವನು ಮೂಗುತಿಯನ್ನೂ, ತನ್ನ ಸಹೋದರಿಯ ಕೈಗಳಲ್ಲಿದ್ದ ಬಳೆಗಳನ್ನೂ ಕಂಡು, ಆ ಮನುಷ್ಯನು ತನ್ನ ಬಳಿ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿ ರೆಬೆಕ್ಕಳ ಮಾತುಗಳನ್ನು ಕೇಳಿ, ಆ ಮನುಷ್ಯನ ಬಳಿಗೆ ಬಂದನು. ಅವನು ಇನ್ನೂ ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:30
7 ತಿಳಿವುಗಳ ಹೋಲಿಕೆ  

ಒಂಟೆಗಳು ಕುಡಿದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಆಕೆಯ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಇಟ್ಟು - ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.


ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು.


ಬಂದಾಗ ಅವನಿಗೆ - ಯೆಹೋವನ ದಯೆಯನ್ನು ಹೊಂದಿದವನೇ, ಒಳಕ್ಕೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಎಂದು ಹೇಳಿದನು.


ಅಲ್ಲಿ ವಿನೋದಪಡುತ್ತಿರುವ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡಿಕರು ನಾಡಾಡಿಗರೊಂದಿಗೆ ಸೇರಿ ಅವರಿಬ್ಬರ ಕೈಗೆ ಕಡಗವನ್ನು ತೊಡಿಸಿ ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.


ಅವನು ಒಂದಾನೊಂದು ದಿವಸ ತನ್ನ ತಾಯಿಗೆ - ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ; ಇಗೋ, ಆ ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು ಎಂದು ಹೇಳಲು ಆಕೆಯು - ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಅಂದಳು.


ಜುಮಕಿ, ಬಳೆ, ಮುಸುಕು, ಮುಂಡಾಸ, ಕಾಲಸರಪಣಿ, ನಡುಕಟ್ಟು, ಗಂಧದ ಡಬ್ಬಿ, ತಾಯಿತಿ,


ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು