ಆದಿಕಾಂಡ 24:35 - ಕನ್ನಡ ಸತ್ಯವೇದವು J.V. (BSI)35 ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟದ್ದರಿಂದ ಅವನು ಧನವಂತನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಸರ್ವೇಶ್ವರ ನನ್ನೊಡೆಯನನ್ನು ಯಥೇಚ್ಛವಾಗಿ ಆಶೀರ್ವದಿಸಿದ್ದಾರೆ; ದನಕುರಿಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಹೇಸರಗತ್ತೆಗಳನ್ನೂ ಕೊಟ್ಟಿದ್ದಾರೆ. ನನ್ನೊಡೆಯ ಐಶ್ವರ್ಯವಂತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟೆಗಳೂ ಕತ್ತೆಗಳೂ ಇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಯೆಹೋವ ದೇವರು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ಧನವಂತನಾದನು. ದೇವರು ಅವನಿಗೆ ಕುರಿದನ, ಬೆಳ್ಳಿಬಂಗಾರ, ದಾಸದಾಸಿ, ಒಂಟೆಗಳು ಮತ್ತು ಕತ್ತೆಗಳನ್ನು ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |