ಆದಿಕಾಂಡ 24:40 - ಕನ್ನಡ ಸತ್ಯವೇದವು J.V. (BSI)40 ಅವನು ನನಗೆ - ನಾನು ಯೆಹೋವನಿಗೆ ನಡೆದುಕೊಳ್ಳುತ್ತೇನಲ್ಲಾ; ಆತನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅವನು ನನಗೆ, “ನಾನು ಆರಾಧನೆ ಮಾಡುತ್ತಾ ಬಂದಿರುವ ನನ್ನ ದೇವರಾದ ಆ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಅದಕ್ಕೆ ಅವರು, ‘ಯಾವ ಸರ್ವೇಶ್ವರ ಸ್ವಾಮಿಗೆ ನಾನು ವಿಧೇಯನಾಗಿ ನಡೆದುಕೊಂಡೆನೋ ಅವರು ತಮ್ಮ ದೂತನನ್ನು ನಿನ್ನೊಂದಿಗೆ ಕಳುಹಿಸುವರು. ನನ್ನ ತಂದೆಯ ಮನೆತನಕ್ಕೆ ಸೇರಿದ ಬಂಧುಬಳಗದವರಿಂದಲೇ ನನ್ನ ಮಗನಿಗೆ ಹೆಣ್ಣು ತರಲು ನಿನಗೆ ಅನುಕೂಲ ಮಾಡಿಕೊಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಆದರೆ ನನ್ನ ಒಡೆಯನು ನನಗೆ, ‘ನಾನು ಯೆಹೋವನ ಸೇವೆ ಮಾಡುತ್ತಿದ್ದೇನೆ. ಆದ್ದರಿಂದ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನಿನಗೆ ಸಹಾಯ ಮಾಡುವನು. ಅಲ್ಲಿರುವ ನನ್ನ ತಂದೆಯ ಕುಟುಂಬದವರಲ್ಲಿ ನೀನು ನನ್ನ ಮಗನಿಗಾಗಿ ಒಬ್ಬ ಕನ್ಯೆಯನ್ನು ಕಂಡುಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 “ಅವನು ನನಗೆ, ‘ನಾನು ಯಾರ ಮುಂದೆ ನಂಬಿಗಸ್ತಿಕೆಯಿಂದ ನಡೆದುಕೊಳ್ಳುತ್ತೇನೋ, ಆ ಯೆಹೋವ ದೇವರು ತಮ್ಮ ದೂತನನ್ನು ನಿನ್ನ ಸಂಗಡ ಕಳುಹಿಸಿ, ನೀನು ನನ್ನ ಬಂಧುಗಳಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ನಿನ್ನ ಪ್ರಯತ್ನವನ್ನು ಸಫಲಮಾಡುವರು. ಅಧ್ಯಾಯವನ್ನು ನೋಡಿ |