Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:44 - ಕನ್ನಡ ಸತ್ಯವೇದವು J.V. (BSI)

44 ಅವಳು - ಕುಡಿಯಪ್ಪಾ ಮತ್ತು ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ ಅನ್ನುವಳೋ, ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ನಿಕೆಯಾಗಿರಲಿ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ‘ಕುಡಿಯಿರಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದು ಕೊಡುತ್ತೇನೆ ಅನ್ನುವಳೋ ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ಯೆಯಾಗಿರಲಿ’ ಎಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 "ಕುಡಿಯಪ್ಪಾ, ಮತ್ತು ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ’ ಎನ್ನುವಳೋ ಅವಳೇ ಸರ್ವೇಶ್ವರ ಸ್ವಾಮಿಯಿಂದ ನನ್ನೊಡೆಯನ ಮಗನಿಗೆ ಚುನಾಯಿತಳಾದ ಕನ್ನಿಕೆಯಾಗಿರಲಿ' ಎಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಅವಳು ನನಗೆ, “ನೀನೂ ನೀರನ್ನು ಕುಡಿ, ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ” ಎಂದು ಹೇಳಿದರೆ, ನನ್ನ ಒಡೆಯನ ಮಗನಿಗೆ ಯೆಹೋವನು ಆರಿಸಿಕೊಂಡಿರುವ ಕನ್ನಿಕೆ ಇವಳೇ ಎಂಬುದಾಗಿ ತಿಳಿದುಕೊಳ್ಳುವೆ’ ಎಂದು ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆಕೆಯು ನನಗೆ, “ನೀನೂ ಕುಡಿ, ನಿನ್ನ ಒಂಟೆಗಳಿಗೂ ಸೇದಿ ಹಾಕುತ್ತೇನೆ,” ಎಂದು ನನಗೆ ಹೇಳಿದರೆ, ಆಕೆಯೇ ಯೆಹೋವ ದೇವರಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾಗಿರಲಿ,’ ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:44
11 ತಿಳಿವುಗಳ ಹೋಲಿಕೆ  

ನಾನು ಯಾವ ಹುಡುಗಿಗೆ - ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವದಕ್ಕೆ ಕೊಡು ಎಂದು ಹೇಳುವಾಗ - ನೀನು ಕುಡಿಯಬಹುದು, ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ ಅನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇವಿುಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯವದೆ ಎಂದು ಇದರಿಂದ ನನಗೆ ಗೊತ್ತಾಗುವದು ಅಂದನು.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರರ ಸುಖದುಃಖಗಳಲ್ಲಿ ಸೇರುವವರಾಗಿರಿ; ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ಕರುಣೆಯೂ ದೀನಭಾವವೂ ಉಳ್ಳವರಾಗಿರಿ.


ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಅವರು ಜಡೆ ಚಿನ್ನ ಮುತ್ತು ಬೆಲೆಯುಳ್ಳ ವಸ್ತ್ರ ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು; ಘನವಾದವುಗಳಲ್ಲಿಯೇ ನಿರತನಾಗಿರುವನು.


ಮನೆಮಾರೂ ಆಸ್ತಿಪಾಸ್ತಿಯೂ ಪಿತೃಗಳಿಂದ ದೊರಕುವವು; ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.


ಪತ್ನೀಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.


ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ.


ತಾನು ಮನುಷ್ಯನಿಂದ ತೆಗೆದಿದ್ದ ಎಲುಬನ್ನು ಸ್ತ್ರೀಯಾಗ ಮಾಡಿ ಆಕೆಯನ್ನು ಅವನ ಬಳಿಗೆ ಕರತಂದನು.


ನೀನು ದಯವಿಟ್ಟು ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವದಕ್ಕೆ ಕೊಡಮ್ಮಾ ಎಂದು ನಾನು ಹೇಳುವಾಗ


ನಾನು ಹೀಗೆ ಮನಸ್ಸಿನೊಳಗೆ ಮಾತಾಡಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವದನ್ನು ಕಂಡೆನು. ಆಕೆ ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ - ನನಗೆ ನೀರನ್ನು ಕುಡಿಯುವದಕ್ಕೆ ಕೊಡಬೇಕಮ್ಮಾ ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು