Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:49 - ಕನ್ನಡ ಸತ್ಯವೇದವು J.V. (BSI)

49 ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಡೆಯುವದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ತಿರುಗಿಕೊಂಡು ಹೋಗುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ, ನಂಬಿಕೆಯಿಂದಲೂ ನಡೆಯುವುದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ನನ್ನ ಪ್ರಯಾಣ ಮುಂದುವರೆಸುತ್ತೇನೆ” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಹೀಗಿರುವಲ್ಲಿ ನೀವು ನನ್ನೊಡೆಯನಿಗೆ ಪ್ರತಿ ಪ್ರೀತಿಯನ್ನೂ ಪ್ರಾಮಾಣಿಕತೆಯನ್ನೂ ತೋರಲು ಒಪ್ಪಿದರೆ ನನಗೆ ಹೇಳಿ; ಇಲ್ಲವಾದರೆ ಇಲ್ಲವೆನ್ನಿ; ಆಗ ಯಾವ ಕಡೆ ತಿರುಗಬೇಕೆಂದು ನನಗೆ ಗೊತ್ತಾಗುತ್ತದೆ,” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಈಗ ನಿಮ್ಮ ಅಭಿಪ್ರಾಯವನ್ನು ತಿಳಿಸಿರಿ. ನೀವು ನನ್ನ ಒಡೆಯನಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಿಮ್ಮ ಮಗಳನ್ನು ಕೊಡುವಿರಾ? ಅಥವಾ ಕೊಡುವುದಿಲ್ಲವೇ? ನಿಮ್ಮ ಉತ್ತರಕ್ಕನುಸಾರವಾಗಿ ನಾನು ಮುಂದಿನ ಕಾರ್ಯದ ಬಗ್ಗೆ ಆಲೋಚಿಸುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಆದ್ದರಿಂದ ನೀವು ನನ್ನ ಯಜಮಾನನಿಗೆ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ವರ್ತಿಸುವುದಾದರೆ ನನಗೆ ತಿಳಿಸಿರಿ. ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ, ಎಡಗಡೆಯಾದರೂ ತಿರುಗಿಕೊಂಡುಹೋಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:49
6 ತಿಳಿವುಗಳ ಹೋಲಿಕೆ  

ಇಸ್ರಾಯೇಲನಿಗೆ ಅವಸಾನಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರಸಿ - ನಿನಗೆ ನನ್ನ ಮೇಲೆ ಪ್ರೀತಿಯಿದ್ದರೆ ನೀನು ನಂಬಿಕೆಯಿಂದಲೂ ಪ್ರೀತಿಯಿಂದಲೂ ನನ್ನ ಮಾತನ್ನು ನಡಿಸಬೇಕು; ಏನಂದರೆ, ನನಗೆ ಐಗುಪ್ತ ದೇಶದಲ್ಲಿ ಸಮಾಧಿಮಾಡಬೇಡವೆಂದು ಕೇಳಿಕೊಳ್ಳುತ್ತೇನೆ.


ಆಗ ಆ ಮನುಷ್ಯರು - ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುವೆವು; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಮ್ಮ ಮಾತಿನಂತೆ ನಿನ್ನಲ್ಲಿ ದಯದಿಂದ ನಡೆದುಕೊಳ್ಳುವೆವು ಅಂದರು.


ಪ್ರೀತಿಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ;


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಪಾತ್ರನಾಗಿದ್ದೇನೆ. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಪಾಳೆಯಗಳಿಗೆ ಒಡೆಯನಾಗಿದ್ದೇನೆ.


ನಿನ್ನ ದೇಶವನ್ನು ದಾಟಿಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.


ತಮ್ಮ ದೇಶವನ್ನು ದಾಟಿಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿ ಯಾದರೂ ದ್ರಾಕ್ಷೇತೋಟಗಳಲ್ಲಿಯಾದರೂ ಹೋಗುವದಿಲ್ಲ; ಬಾವಿಗಳ ನೀರನ್ನು ಕುಡಿಯುವದಿಲ್ಲ; ರಾಜ ಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟಿದ ತನಕ ಬಲಕ್ಕೂ ಎಡಕ್ಕೂ ತಿರುಗುವದಿಲ್ಲ ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು