Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:53 - ಕನ್ನಡ ಸತ್ಯವೇದವು J.V. (BSI)

53 ಆಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ಉಡುಗೊರೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಅವನು ಬೆಳ್ಳಿಯ ಒಡವೆ, ಬಂಗಾರದ ಒಡವೆ, ವಸ್ತ್ರಗಳನ್ನೂ ತಂದು, ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ, ಆಕೆಯ ತಾಯಿಗೂ ಅಮೂಲ್ಯವಾದ ಉಡುಗೊರೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:53
11 ತಿಳಿವುಗಳ ಹೋಲಿಕೆ  

ಒಂಟೆಗಳು ಕುಡಿದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಆಕೆಯ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಇಟ್ಟು - ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.


ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ ದಣಿಯ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಗೆ ಬಂದು ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.


ಇಸ್ರಾಯೇಲ್ಯರು ಮೋಶೆಯ ಮಾತಿನ ಮೇರೆಗೆ ಐಗುಪ್ತ್ಯರಿಂದ ಬೆಳ್ಳಿಬಂಗಾರದ ಒಡವೆಗಳನ್ನೂ ಬಟ್ಟೆಗಳನ್ನೂ ಕೇಳಿಕೊಂಡರು.


ಆದದರಿಂದ ಸ್ತ್ರೀಪುರುಷರೆಲ್ಲರೂ ತಮ್ಮತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬದಾಗಿ ಜನರಿಗೆ ಸ್ಪಷ್ಟವಾಗಿ ಹೇಳು ಅಂದನು.


ನಿಮ್ಮಲ್ಲಿ ಪ್ರತಿ ಸ್ತ್ರೀಯು ನೆರೇ ಹೆಂಗಸರಿಂದಲೂ ನಿಮ್ಮ ಮನೆಯಲ್ಲಿ ಇಳುಕೊಂಡ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ಇಡಿರಿ; ಇದರಿಂದ ಐಗುಪ್ತ್ಯರನ್ನು ಸೂರೆ ಮಾಡುವಿರಿ ಅಂದನು.


ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧ ದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧ ಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.


ನಿನ್ನ ಉದ್ಯಾನದಲ್ಲಿ ದಾಳಿಂಬರದ ವನ, ಉತ್ತಮಫಲ, ಜಟಾಮಾಂಸಿ, ಗೋರಂಟೆ,


ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.


ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ ಶ್ರೇಷ್ಠವಸ್ತು ಇತ್ಯಾದಿ ವಿಶೇಷದಾನಗಳನ್ನು ಕೊಟ್ಟನು; ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.


ನಿನ್ನ ಕೆನ್ನೆಗಳು ಜಡೆಗಳಿಂದಲೂ ನಿನ್ನ ಕಂಠವು ಹಾರಗಳಿಂದಲೂ ಎಷ್ಟೋ ಅಂದವಾಗಿವೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು