Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:54 - ಕನ್ನಡ ಸತ್ಯವೇದವು J.V. (BSI)

54 ಬಳಿಕ ಅವನೂ ಅವನ ಸಂಗಡ ಬಂದ ಮನುಷ್ಯರೂ ಊಟ ಉಪಚಾರಗಳನ್ನು ತೀರಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಿಗ್ಗೆ ಎದ್ದಾಗ ಅವನು - ನನ್ನ ದಣಿಯ ಬಳಿಗೆ ಹೊರಡುವದಕ್ಕೆ ನನಗೆ ಅಪ್ಪಣೆಯಾಗಲಿ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಗ್ಗೆ ಎದ್ದಾಗ ಅವನು, “ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ” ಎಂದು ಕೇಳಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಅವನು ಮತ್ತು ಅವನ ಸಂಗಡ ಬಂದಿದ್ದವರು ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯನ್ನು ಅಲ್ಲೇ ಕಳೆದರು. ಬೆಳಿಗ್ಗೆ ಎದ್ದು, “ನನ್ನೊಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದ ಆ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಆ ಸೇವಕನು ಮತ್ತು ಅವನ ಸಂಗಡಿಗರು ಅಲ್ಲಿ ಇಳಿದುಕೊಂಡು ಊಟಮಾಡಿದರು. ಅವರು ಮರುದಿನ ಮುಂಜಾನೆ ಎದ್ದು, “ಈಗ ನಾವು ನಮ್ಮ ಒಡೆಯನ ಬಳಿಗೆ ಹೋಗುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ತರುವಾಯ ಅವನೂ, ಅವನ ಸಂಗಡ ಇದ್ದ ಜನರೂ ಊಟಮಾಡಿ, ಕುಡಿದು, ರಾತ್ರಿಯನ್ನು ಅಲ್ಲೇ ಕಳೆದರು. ಬೆಳಿಗ್ಗೆ ಎದ್ದ ಮೇಲೆ ಅವನು, “ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:54
10 ತಿಳಿವುಗಳ ಹೋಲಿಕೆ  

ಅವನು ಅವರಿಗೆ - ಯೆಹೋವನು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾನೆ; ಆದದರಿಂದ ನನ್ನನ್ನು ತಡೆಯಬೇಡಿರಿ; ನನ್ನ ದಣಿಯ ಬಳಿಗೆ ಹೋಗುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಹೇಳಲು


ಆಕೆ - ಹೋಗುತ್ತೇನೆ ಅನ್ನಲು ಅವರು ತಮ್ಮ ತಂಗಿಯಾದ ರೆಬೆಕ್ಕಳನ್ನೂ ಆಕೆಯ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಸಂಗಡ ಬಂದ ಮನುಷ್ಯರನ್ನೂ ಸಾಗಕಳುಹಿಸಿದರು.


ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ; ನೀನು ಈ ವಿಷಯದಲ್ಲಿ ವಿಚಾರಿಸುವದು ಜ್ಞಾನಕಾರ್ಯವಲ್ಲ.


ತನ್ನ ಕೆಲಸದಲ್ಲಿ ಚಟುವಟಿಕೆಯಾಗಿರುವವನನ್ನು ನೋಡು; ಇಂಥವನು ರಾಜರನ್ನು ಸೇವಿಸುವನಲ್ಲದೆ ನೀಚರನ್ನು ಸೇವಿಸುವದಿಲ್ಲ.


ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ - ಅಪ್ಪಣೆಯಾಗಲಿ, ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭವರ್ತಮಾನವನ್ನು ತಿಳಿಸುವೆನು ಅನ್ನಲು


ಆಗ ತನ್ನ ಅಣ್ಣತಮ್ಮಂದಿರಿಗೆ - ನೀವು ದಾರಿಯಲ್ಲಿ ಜಗಳಮಾಡಬೇಡಿರಿ ಎಂದು ಬುದ್ಧಿ ಹೇಳಿ ಅವರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟನು; ಅವರು ಹೊರಟುಹೋದರು.


ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ - ನನಗೆ ಅಪ್ಪಣೆ ಕೊಡಬೇಕು; ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು