Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:61 - ಕನ್ನಡ ಸತ್ಯವೇದವು J.V. (BSI)

61 ರೆಬೆಕ್ಕಳೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿದವರಾಗಿ ಅಬ್ರಹಾಮನ ಸೇವಕನ ಹಿಂದೆ ಹೋದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ರೆಬೆಕ್ಕಳೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿದವರಾಗಿ ಅಬ್ರಹಾಮನ ಸೇವಕನ ಹಿಂದೆ ಹೋದರು. ಹೀಗೆ ಆ ಸೇವಕರು ರೆಬೆಕ್ಕಳನ್ನು ಕರೆದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

61 ರೆಬೆಕ್ಕಳು ಮತ್ತು ಆಕೆಯ ದಾದಿಯರು ಒಂಟೆಗಳ ಮೇಲೆ ಅಬ್ರಹಾಮನ ಸೇವಕನನ್ನು ಹಿಂಬಾಲಿಸಿ ಹೋದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ಆಮೇಲೆ ರೆಬೆಕ್ಕಳು ಮತ್ತು ಆಕೆಯ ಸೇವಕಿಯರು ಒಂಟೆಯ ಮೇಲೆ ಹತ್ತಿ ಕುಳಿತುಕೊಂಡು ಆ ಸೇವಕನನ್ನೂ ಅವನ ಸಂಗಡಿಗರನ್ನೂ ಹಿಂಬಾಲಿಸಿದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಮನೆಗೆ ಮರಳಿ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಆಗ ರೆಬೆಕ್ಕಳೂ, ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ, ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:61
10 ತಿಳಿವುಗಳ ಹೋಲಿಕೆ  

ಎಲೌ ಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತವರುಮನೆಯನ್ನೂ ಮರೆತುಬಿಡು.


ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರು ಒಂದೇ ಶರೀರವಾಗಿರುವರು.


ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅರಮನೆಯ ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿಶೀಘ್ರವಾಗಿ ಹೊರಟರು.


ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಅವುಗಳಿಗೆ ರಾಜಮುದ್ರೆಯನ್ನು ಹಾಕಿ ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮುಖಾಂತರ ಕಳುಹಿಸಿದನು.


ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಾಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.


ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು ಅವುಗಳ ಮೇಲೆ ಕೂತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನನ್ನೆಲ್ಲಾ ಮುಟ್ಟಿಮುಟ್ಟಿ ನೋಡಿದರೂ ಅವುಗಳನ್ನು ಕಾಣಲಿಲ್ಲ.


ಮತ್ತು ರೆಬೆಕ್ಕಳಿಗೆ - ತಂಗಿಯೇ, ನಿನ್ನಿಂದ ಲಕ್ಷಾಂತರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿ ಎಂದು ಹೇಳಿ ಹರಸಿದರು.


ಅಷ್ಟರಲ್ಲಿ ಇಸಾಕನು ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.


ನಿಶ್ಚಯವಾಗಿ ಅವರಿಗೆ ಕೊಳ್ಳೆಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬ ಸೈನಿಕನಿಗೆ ಒಬ್ಬಿಬ್ಬರು ದಾಸಿಯರೂ ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ ವಿಚಿತ್ರವಾಗಿ ಕಸೂತಿಹಾಕಿದ ಒಂದೆರಡು ವಸ್ತ್ರಗಳೂ ಕಂಠಮಾಲೆಯೂ ದೊರಕಿರುತ್ತವೆ ಎಂಬದೇ.


ಬೇಗನೆ ಒಂದು ಕತ್ತೆಯನ್ನು ಹತ್ತಿ ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟುಹೋಗಿ ಅವನ ಹೆಂಡತಿಯಾದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು