ಆದಿಕಾಂಡ 24:63 - ಕನ್ನಡ ಸತ್ಯವೇದವು J.V. (BSI)63 ಅವನು ಸಂಜೇವೇಳೆಯಲ್ಲಿ ಧ್ಯಾನಮಾಡುವದಕ್ಕೋಸ್ಕರ ಅಡವಿಗೆ ಹೋಗಿದ್ದಾಗ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವದನ್ನು ಕಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ಇಸಾಕನು ಸಂಜೆ ವೇಳೆಯಲ್ಲಿ ಧ್ಯಾನ ಮಾಡುವುದಕ್ಕಾಗಿ ಬಯಲು ಪ್ರದೇಶಕ್ಕೆ ಹೋಗಿದ್ದನು. ಅಲ್ಲಿ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಸಂಜೆ ವೇಳೆಯಲ್ಲಿ ಅವನು ವಿಶ್ರಾಂತಿಗಾಗಿ ತಿರುಗಾಡಲು ಹೋಗಿದ್ದನು. ಕಣ್ಣೆತ್ತಿ ನೋಡಿದಾಗ ಒಂಟೆಗಳು ಬರುತ್ತಿರುವುದು ಅವನಿಗೆ ಕಾಣಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್63 ಸಾಯಂಕಾಲದಲ್ಲಿ ಇಸಾಕನು ಧ್ಯಾನಮಾಡಲು ಹೊಲಕ್ಕೆ ಹೋದನು. ಇಸಾಕನು ಕಣ್ಣೆತ್ತಿ ನೋಡಿದಾಗ ಬಹುದೂರದಲ್ಲಿ ಒಂಟೆಗಳು ಬರುತ್ತಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ63 ಇಸಾಕನು ಸಾಯಂಕಾಲ ಹೊಲದಲ್ಲಿ ಧ್ಯಾನಮಾಡುವುದಕ್ಕೆ ಹೋದಾಗ, ಕಣ್ಣೆತ್ತಿ ನೋಡಲು, ಒಂಟೆಗಳು ಬರುವುದನ್ನು ಕಂಡನು. ಅಧ್ಯಾಯವನ್ನು ನೋಡಿ |