Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:65 - ಕನ್ನಡ ಸತ್ಯವೇದವು J.V. (BSI)

65 ನಮ್ಮನ್ನು ಎದುರುಗೊಳ್ಳುವದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರೆಂದು ಆ ಸೇವಕನನ್ನು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕುಹಾಕಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 “ನಮ್ಮ ಕಡೆ ಹೊಲದಲ್ಲಿ ನಡೆದು ಬರುತ್ತಿರುವ ಆ ಮನುಷ್ಯ ಯಾರು?” ಎಂದು ಆ ಸೇವಕನನ್ನು ಕೇಳಿದಳು. “ಅವನೇ ನನ್ನೊಡೆಯ” ಎಂದು ಹೇಳಿದಾಗ ಆಕೆ ಮುಸಕುಹಾಕಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು. ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಆಕೆಯು ಆ ಸೇವಕನಿಗೆ, “ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು?” ಎಂದಳು. ಅದಕ್ಕೆ ಸೇವಕನು, “ಅವನೇ ನನ್ನ ಯಜಮಾನನು,” ಎಂದಾಗ, ಆಕೆಯು ಮುಸುಕು ಹಾಕಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:65
9 ತಿಳಿವುಗಳ ಹೋಲಿಕೆ  

ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಡಂಭವಿಲ್ಲದವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ.


ಹೀಗಿರುವದರಿಂದ ದೂತರ ನಿವಿುತ್ತವಾಗಿ ಸ್ತ್ರೀಯು ಪುರುಷನ ಅಧಿಕಾರ ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.


ಇದಲ್ಲದೆ ಅವನು ಸಾರಳಿಗೆ - ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಲಕ್ಷ್ಯಕ್ಕೆ ತೆಗೆದುಕೊಳ್ಳದಂತೆ ಇದು ಪ್ರಾಯಶ್ಚಿತ್ತವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು ಎಂದು ಹೇಳಿದನು.


ರೆಬೆಕ್ಕಳು ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಬೇಗ ಇಳಿದು -


ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದನಂತರ


ಆಗ ಆಕೆ - ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾವಸ್ತ್ರಗಳನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು [ವೇಶ್ಯಾಸ್ತ್ರೀಯಂತೆ] ಅಲಂಕೃತಳಾಗಿ ತಿಮ್ನಾವೂರಿನ ದಾರಿಯಲ್ಲಿರುವ ಏನಯಿಮೂರಿನ ಬಾಗಿಲ ಬಳಿಯಲ್ಲಿ ಕೂತುಕೊಂಡಳು.


ಬೀಸುವ ಕಲ್ಲನ್ನು ಹಿಡಿದು ಹಿಟ್ಟು ಬೀಸು, ಮುಸುಕನ್ನು ತೆಗೆದುಹಾಕಿ ಈಜಾಡುವ ನೆರಿಗೆಯನ್ನು ಹರಿದುಬಿಟ್ಟು ಬೆತ್ತಲೆಕಾಲಾಗಿ ಹೊಳೆಗಳನ್ನು ಹಾದುಹೋಗು.


ಶಾಲು, ಚೀಲ, ಕೈಗನ್ನಡಿ, ನಾರುಮಡಿ, ಶಿರೋವೇಷ್ಟನ, ಮೇಲ್ಹೊದಿಕೆ, ಈ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು