ಆದಿಕಾಂಡ 24:7 - ಕನ್ನಡ ಸತ್ಯವೇದವು J.V. (BSI)7 ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು - ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನೆಂದು ಪ್ರಮಾಣಮಾಡಿ ಹೇಳಿದ ಪರಲೋಕದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳುವಂತೆ ಅನುಕೂಲಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು. ಅಧ್ಯಾಯವನ್ನು ನೋಡಿ |
ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.
ಐಗುಪ್ತದೇಶದೊಳಗಿಂದ ಬಂದ ಈ ಜನರೊಳಗೆ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದದರಿಂದ ಅವರೊಳಗೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸಿನವರಲ್ಲಿ ಅವರಿಬ್ಬರೇ ಹೊರತಾಗಿ ಒಬ್ಬನಾದರೂ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ನೋಡುವದೇ ಇಲ್ಲ ಎಂದು ಖಂಡಿತವಾಗಿ ಹೇಳಿದನು.