Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:25 - ಕನ್ನಡ ಸತ್ಯವೇದವು J.V. (BSI)

25 ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು; ಅದಕ್ಕೆ ಏಸಾವ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ “ಏಸಾವ” ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮೊದಲು ಹುಟ್ಟಿದ ಮಗು ಕೆಂಚಗೂ ಮೈಯೆಲ್ಲ ರೋಮಮಯವಾಗೂ ಇತ್ತು. ಎಂತಲೇ ಅದಕ್ಕೆ ಏಸಾವ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮೊದಲನೆಯ ಮಗುವು ಕೆಂಪಗಿತ್ತು. ಅವನ ಚರ್ಮವು ಕೂದಲಿನ ಉಡುಪಿನಂತಿತ್ತು. ಆದ್ದರಿಂದ ಅವನಿಗೆ “ಏಸಾವ್” ಎಂದು ಹೆಸರಿಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೊದಲನೆಯವನು ಕೆಂಪಾಗಿಯೂ ಕೂದಲಿನ ವಸ್ತ್ರದಂತೆ ಇಡೀ ದೇಹವು ಇದ್ದುದರಿಂದ ಅವನಿಗೆ, ಏಸಾವ, ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:25
10 ತಿಳಿವುಗಳ ಹೋಲಿಕೆ  

ಅದಕ್ಕೆ ಯಾಕೋಬನು - ನನ್ನ ಅಣ್ಣನ ಮೈ ಬಹಳ ರೋಮವುಳ್ಳದ್ದು, ನನ್ನ ಮೈ ನುಣ್ಣಗದೆ;


ಯಾಕೋಬನ ಕೈಗಳು ಅವನ ಅಣ್ಣನ ಕೈಗಳಂತೆ ರೋಮವುಳ್ಳವುಗಳಾಗಿದ್ದದರಿಂದ ಇಸಾಕನು ಅವನ ಗುರುತನ್ನು ತಿಳಿಯಲಾರದೆ ಅವನನ್ನು ಆಶೀರ್ವದಿಸಿದನು.


ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ ನುಣುಪಾದ ಕೊರಳಿಗೂ ಸುತ್ತಿ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ


ಆಕೆ ದಿನತುಂಬಿದಾಗ ಅವಳಿಮಕ್ಕಳನ್ನು ಹೆತ್ತಳು.


ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ತನ್ನ ಹಿರೀ ಮಗನಾದ ಏಸಾವನನ್ನು ಕರೆದು - ಮಗನೇ ಅನ್ನಲು ಏಸಾವನು - ಇದ್ದೇನೆ ಅಂದನು.


ಇಸಾಕನಿಗೆ ಯಾಕೋಬ್, ಏಸಾವ್ ಎಂಬಿಬ್ಬರು ಮಕ್ಕಳನ್ನು ಅನುಗ್ರಹಿಸಿ ಏಸಾವನಿಗೆ ಸೇಯೀರ್ ಪರ್ವತವನ್ನು ಸ್ವಾಸ್ತ್ಯವಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.


ಅಬ್ರಹಾಮನು ಇಸಾಕನನ್ನು ಪಡೆದನು; ಏಸಾವ ಇಸ್ರಾಯೇಲರು ಇಸಾಕನ ಮಕ್ಕಳು.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ - ತಮ್ಮ ಸಂಬಂಧಿಕರಾದ ಇಸ್ರಾಯೇಲ್ಯರು ಕೇಳಿಕೊಳ್ಳುವದೇನಂದರೆ - ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಷ್ಟೆ.


ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು.


ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವೋ - ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು