ಆದಿಕಾಂಡ 25:27 - ಕನ್ನಡ ಸತ್ಯವೇದವು J.V. (BSI)27 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನೆಂಬವನು ಬೇಟೆಯಾಡುವದರಲ್ಲಿ ಜಾಣನಾದನು; ಅವನು ಅರಣ್ಯವಾಸಿ. ಯಾಕೋಬನು ಸಾಧುಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಹುಡುಗರಿಬ್ಬರು ಬೆಳೆದರು. ಏಸಾವನು ಚೂಟಿಯಾದ ಬೇಟೆಗಾರನಾದ, ವನವಾಸಿಯಾದ, ಯಕೋಬನು ಸಾಧುಮನುಷ್ಯ, ಅವನದು ಗುಡಾರಗಳಲ್ಲಿ ವಾಸ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆ ಹುಡುಗರು ಬೆಳೆದಾಗ ಏಸಾವನು ಬೇಟೆಯಾಡುವುದರಲ್ಲಿ ಜಾಣನಾಗಿದ್ದು, ಅಡವಿಯ ಮನುಷ್ಯನಾದನು. ಯಾಕೋಬನು ಗುಡಾರಗಳಲ್ಲಿ ವಾಸಮಾಡುವ ಸಾಧು ಮನುಷ್ಯನಾಗಿದ್ದನು. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.