Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:3 - ಕನ್ನಡ ಸತ್ಯವೇದವು J.V. (BSI)

3 ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಯೂರ್ಯರೂ ಲೆಟೂಶ್ಯರೂ ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಮೂರ್ಯರೂ, ಲೆಟೂಶ್ಯರೂ, ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೊಕ್ಷಾನನು ಶೆಬಾ, ದೆದಾನ್ ಎಂಬವರನ್ನು ಪಡೆದನು. ಅಶ್ಯೂರ್ಯರು, ಲೆಟೂಶ್ಯರೂ ಲೆಯುಮ್ಯರು ದೆದಾನನಿಂದ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರ ತಂದೆ. ದೆದಾನನ ಸಂತತಿಯವರು: ಅಶ್ಶೂರ್ಯರು ಲೆಟೂಶ್ಯರು ಮತ್ತು ಲೆಯುಮ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೊಕ್ಷಾನನಿಗೆ ಶೆಬಾ ಮತ್ತು ದೆದಾನ್ ಹುಟ್ಟಿದರು. ದೆದಾನನ ಪುತ್ರರು ಅಶ್ಯೂರರು, ಲೆಟೂಶ್ಯರೂ, ಲೆಯುಮ್ಯರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:3
14 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಎದೋವಿುನ ಮೇಲೆ ಕೈಯೆತ್ತಿ ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ದೆದಾನಿನವರು ಹಲ್ಲಣಕ್ಕೆ ಸರಿಯಾದ ಒಳ್ಳೆಯ ಜಮಖಾನೆಗಳನ್ನು ನಿನಗೋಸ್ಕರ ತರುವ ವ್ಯಾಪಾರಿಗಳಾಗಿದ್ದರು.


ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಹುಟ್ಟುಗಳನ್ನು ರೂಪಿಸಿ ಕಿತ್ತೀಮ್ ದ್ವೀಪದ ತಿಲಕದ ಹಲಿಗೆಯಿಂದ ನಿನ್ನ ಮೇಲ್ಮಾಳಿಗೆಯನ್ನು ಕಟ್ಟಿ ದಂತದಿಂದ ಕೆತ್ತಿದರು.


ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.


ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾದೇಶದವರು, ಬೂಜ್‍ದೇಶದವರು, ಚಂಡಿಕೆಬಿಟ್ಟುಕೊಂಡಿರುವವರೆಲ್ಲರು,


ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು.


ಯೆಹೋವನಾಮ ಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬದ ರಾಣಿಯು ಕೇಳಿ ಅವನನ್ನು ಒಗಟುಗಳಿಂದ ಪರೀಕ್ಷಿಸುವದಕ್ಕೆ ಬಂದಳು.


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್, ಬೆನ್ಯಾಮೀನ್ ಇವುಗಳ ಜನರ ಮೇಲೆಯೂ ಬೇರೆ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಅರಸನನ್ನಾಗಿ ಮಾಡಿದನು.


ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ವಿುದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.


ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಗ ಎಂಬಿವರು ವಿುದ್ಯಾನನಿಂದ ಹುಟ್ಟಿದರು. ಇವರೆಲ್ಲರು ಕೆಟೂರಳ ಸಂತತಿಯವರು.


ಉಷ್ಟ್ರಸಮೂಹವೂ ವಿುದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಆ ಸ್ವಾರ್ಥವಾಹರೆಲ್ಲಾ ಕನಕವನ್ನೂ ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.


ಅರಬಿಯ ವಿಷಯವಾದ ದೈವೋಕ್ತಿ. ಸಾರ್ಥವಾಹರಾದ ದೇದಾನ್ಯರೇ, ಮರುಭೂವಿುಯ ಪೊದೆಗಳಲ್ಲಿ ಇಳಿದುಕೊಳ್ಳಿರಿ.


ದೇದಾನಿನವರು ನಿನ್ನ ವರ್ತಕರು; ಬಹು ದ್ವೀಪಗಳ ಉತ್ಪತ್ತಿಯು ನಿನ್ನ ಕೈಗೆ ಸೇರಿತು; ಗಜದಂತಗಳನ್ನೂ ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು