Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:34 - ಕನ್ನಡ ಸತ್ಯವೇದವು J.V. (BSI)

34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಎದ್ದುಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ಯಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟ. ಏಸಾವನು ತಿಂದು, ಕುಡಿದು, ಎದ್ದು ಹೋದ. ಜ್ಯೇಷ್ಠತನದ ಹಕ್ಕುಬಾಧ್ಯತೆಗೆ ಏಸಾವನು ಕೊಟ್ಟ ಮರ್ಯಾದೆ ಇಷ್ಟೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ, ಅಲಸಂದಿ ಗುಗ್ಗರಿಯನ್ನೂ ಕೊಟ್ಟನು. ಅವನು ತಿಂದು, ಕುಡಿದು ಎದ್ದು ಹೋದನು. ಹೀಗೆ ಏಸಾವನು ತನ್ನ ಜೇಷ್ಠ ಪುತ್ರನ ಹಕ್ಕನ್ನು ತಾತ್ಸಾರದಿಂದ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:34
15 ತಿಳಿವುಗಳ ಹೋಲಿಕೆ  

ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವದಿಲ್ಲವಾದರೆ - ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ಆದರೆ ಇಗೋ, ಉಲ್ಲಾಸ, ಹರ್ಷ, ದನಕೊಯ್ಯುವದು, ಕುರಿಕಡಿಯುವದು, ಮಾಂಸತಿನ್ನುವದು, ದ್ರಾಕ್ಷಾರಸ ಕುಡಿಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವದು [ಇವೇ ನಿಮ್ಮ ಕಾರ್ಯ].


ಎಲೈ ತಿರಸ್ಕಾರಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದು ಎಂದು ಹೇಳಿದನು.


ನಾನು ಅವನನ್ನು ನಿಮಗೆ ಹಿಡುಕೊಟ್ಟರೆ ನನಗೆ ಏನು ಕೊಡುತ್ತೀರಿ? ಅಂದನು. ಅವರು ಅವನಿಗೆ ಮೂವತ್ತು ರೂಪಾಯಿ ತೂಗಿ ಕೊಟ್ಟರು.


ಆದರೆ ಅವರು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;


ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ ಅದನ್ನು ಡಬ್ಬಿಗೆ ಹಾಕು ಎಂದು ಅಪ್ಪಣೆಮಾಡಿದಾಗ ನಾನು ಆ ಮೂವತ್ತು ತೊಲ ಬೆಳ್ಳಿಯನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.


ಮತ್ತು ಮನುಷ್ಯನು ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವದಕ್ಕಿಂತ ಅವನಿಗೆ ಲೋಕದಲ್ಲಿ ಇನ್ನಾವ ಮೇಲೂ ಇಲ್ಲವೆಂದು ಸಂತೋಷವನ್ನೇ ಸ್ತುತಿಸಿದೆನು; ದೇವರು ಅವನಿಗೆ ಲೋಕದಲ್ಲಿ ಅನುಗ್ರಹಿಸುವ ದಿನಗಳಲ್ಲೆಲ್ಲಾ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವದು.


ಮತ್ತು ಅವರು ಆ ರಮಣೀಯದೇಶವನ್ನು ತಿರಸ್ಕರಿಸಿ ಆತನ ಮಾತನ್ನು ನಂಬಲಿಲ್ಲ.


ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು


ಯಾಕೋಬನು - ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.


ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರವಲ್ಲದೆ ಇನ್ನೂ ಒಂದು ಬರವು ಕಾನಾನ್‍ದೇಶಕ್ಕೆ ಬಂತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.


ಅವನ ತಂದೆಯಾದ ಇಸಾಕನು - ನೀನು ಯಾರು ಎಂದು ಅವನನ್ನು ಕೇಳಲು ಅವನು - ನಾನು ನಿನ್ನ ಚೊಚ್ಚಲ ಮಗನಾದ ಏಸಾವನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು