Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:5 - ಕನ್ನಡ ಸತ್ಯವೇದವು J.V. (BSI)

5 ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಬ್ರಹಾಮನು ತನಗಿದ್ದ ಆಸ್ತಿಪಾಸ್ತಿಯನ್ನೆಲ್ಲ ಇಸಾಕನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5-6 ಅಬ್ರಹಾಮನು ಸಾಯುವುದಕ್ಕಿಂತ ಮುಂಚೆ ತನ್ನ ದಾಸಿಯ ಗಂಡುಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಕೊಟ್ಟನು. ಅಬ್ರಹಾಮನು ಆ ಗಂಡುಮಕ್ಕಳನ್ನು ಪೂರ್ವದ ಕಡೆಯಲ್ಲಿದ್ದ ಕೆದೆಮೆಂಬ ದೇಶಕ್ಕೆ ಕಳುಹಿಸಿ ಅವರನ್ನು ಇಸಾಕನಿಂದ ದೂರಮಾಡಿದನು; ಬಳಿಕ ತನ್ನ ಆಸ್ತಿಯನ್ನೆಲ್ಲ ಇಸಾಕನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:5
18 ತಿಳಿವುಗಳ ಹೋಲಿಕೆ  

ನನ್ನ ದಣಿಯ ಪತ್ನಿಯಾದ ಸಾರಳು ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯು ತನಗಿರುವದನ್ನೆಲ್ಲಾ ಕೊಟ್ಟಿದ್ದಾನೆ.


ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇವಿುಸಿದನು. ಈತನ ಮೂಲಕವೇ ಜಗತ್ತನ್ನು ಉಂಟುಮಾಡಿದನು.


ತಂದೆಯಾದ ದೇವರು ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ


ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರೂ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡುಕೊಂಡು ಹೋಗಿ ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ ಉನ್ನತಸ್ಥಾನಕ್ಕೆ ಏರಿದ್ದೀ. ದೇವನಾದ ಯಾಹುವೇ, ಅಲ್ಲೇ ವಾಸಿಸುವಿ.


ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ.


ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟದ್ದರಿಂದ ಅವನು ಧನವಂತನಾದನು.


ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಗ ಎಂಬಿವರು ವಿುದ್ಯಾನನಿಂದ ಹುಟ್ಟಿದರು. ಇವರೆಲ್ಲರು ಕೆಟೂರಳ ಸಂತತಿಯವರು.


ಅವನಿಗೆ ದನಕುರಿಗಳ ಸಂಪತ್ತೂ ಅನೇಕ ಸೇವಕಜನವೂ ಇದ್ದವು. ಇದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು