Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:1 - ಕನ್ನಡ ಸತ್ಯವೇದವು J.V. (BSI)

1 ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರವಲ್ಲದೆ ಇನ್ನೂ ಒಂದು ಬರವು ಕಾನಾನ್‍ದೇಶಕ್ಕೆ ಬಂತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಿಂದೆ ಅಬ್ರಹಾಮನ ಕಾಲದಲ್ಲಿ ಬಂದಿದ್ದ ಬರಗಾಲವು ಮತ್ತೊಮ್ಮೆ ಕಾನಾನ್ ನಾಡಿಗೆ ಬಂದಿತು. ಇಸಾಕನು ಫಿಲಿಷ್ಟಿಯರ ಅರಸ ಅಬೀಮೆಲೆಕನನ್ನು ಕಾಣಲು ಗೆರಾರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಬ್ರಹಾಮನ ಕಾಲದಲ್ಲಿ ಬಂದಿದ್ದ ಕ್ಷಾಮದಂತೆ ಮತ್ತೊಂದು ಕ್ಷಾಮವು ಕಾನಾನ್ ದೇಶಕ್ಕೆ ಬಂದಿತು. ಆದ್ದರಿಂದ ಇಸಾಕನು ಫಿಲಿಷ್ಟಿಯರ ರಾಜನಾದ ಅಬೀಮೆಲೆಕನ ಬಳಿಗೆ ಹೋದನು. ಅಬೀಮೆಲೆಕನು ಗೆರಾರ್ ನಗರದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ, ದೇಶದಲ್ಲಿ ಮತ್ತೊಂದು ಬರವು ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:1
10 ತಿಳಿವುಗಳ ಹೋಲಿಕೆ  

ಆ ದೇಶದಲ್ಲಿ ಘೋರ ಕ್ಷಾಮವಿದ್ದದರಿಂದ ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದುಹೋದನು.


ಅಬ್ರಹಾಮನು ತೀರಿಹೋದನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನಿಗೂ ಉಂಟಾಯಿತು. ಇಸಾಕನು ಲಹೈರೋಯಿ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.


ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಎದ್ದುಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿದನು.


ಧಾನ್ಯವನ್ನು ಕೊಂಡುಕೊಳ್ಳುವದಕ್ಕೋಸ್ಕರ ಐಗುಪ್ತದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು; ಕಾನಾನ್ ದೇಶದಲ್ಲಿಯೂ ಬರವಿತ್ತಷ್ಟೆ.


ಆ ದೇಶದಲ್ಲಿ ಬರವು ಬಹುಘೋರವಾಗಿತ್ತು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಐಗುಪ್ತದೇಶದಿಂದ ಕರತಂದ ಜನರನ್ನು ನಿನ್ನ ಸಂಗಡ ಕರಕೊಂಡು ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ - ನಿಮ್ಮ ಸಂತತಿಯವರಿಗೆ ಕೊಡುವೆನೆಂದು ಪ್ರಮಾಣ ಮಾಡಿ ಕೊಟ್ಟ ದೇಶಕ್ಕೆ ಹೊರಟುಹೋಗು.


ನ್ಯಾಯಸ್ಥಾಪಕರು ಆಳುತ್ತಿದ್ದಾಗ ದೇಶದಲ್ಲಿ ಬರ ಬಂದದರಿಂದ ಯೆಹೂದಪ್ರಾಂತದ ಬೇತ್ಲೆಹೇವಿುನವನೊಬ್ಬನು ತನ್ನ ಹೆಂಡತಿ, ಇಬ್ಬರು ಕುಮಾರರು ಇವರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೊರಟುಹೋದನು.


ದಾವೀದನ ಕಾಲದಲ್ಲಿ ಮೂರು ವರುಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು - ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ ಅವನ ಮನೆಯವರ ಮೇಲೆಯೂ ರಕ್ತಾಪರಾಧವಿರುತ್ತದೆ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು