Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:2 - ಕನ್ನಡ ಸತ್ಯವೇದವು J.V. (BSI)

2 ಅಲ್ಲಿ ಯೆಹೋವನು ಅವನಿಗೆ ದರ್ಶನಕೊಟ್ಟು - ನೀನು ಐಗುಪ್ತದೇಶಕ್ಕೆ ಇಳಿದುಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ಸರ್ವೇಶ್ವರ ಸ್ವಾಮಿ ಇಸಾಕನಿಗೆ ದರ್ಶನ ಕೊಟ್ಟು ಇಂತೆಂದರು: “ನೀನು ಈಜಿಪ್ಟಿಗೆ ಹೋಗಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನೀನು ಈಜಿಪ್ಟಿಗೆ ಹೋಗಬೇಡ. ನೀನು ಯಾವ ಪ್ರದೇಶದಲ್ಲಿರಬೇಕೆಂದು ನಾನು ಆಜ್ಞಾಪಿಸಿದೆನೋ ಆ ಪ್ರದೇಶದಲ್ಲಿ ವಾಸಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ಈಜಿಪ್ಟಿಗೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:2
11 ತಿಳಿವುಗಳ ಹೋಲಿಕೆ  

ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಅಬ್ರಹಾಮನು ಮಧ್ಯಾಹ್ನದಲ್ಲಿ ಮಮ್ರೇತೋಪಿನ ತನ್ನ ಗುಡಾರದ ಬಾಗಲಲ್ಲಿ ಕೂತಿರುವಾಗ ಯೆಹೋವನು ಅವನಿಗೆ ದರ್ಶನಕೊಟ್ಟನು.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಯೆಹೋವನು ಅಬ್ರಾಮನಿಗೆ - ನೀನು ಸ್ವದೇಶವನ್ನೂ ಬಂಧು ಬಳಗವನ್ನೂ ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಹಾಗಲ್ಲ, ನಿನ್ನ ಪತ್ನಿಯಾದ ಸಾರಳಲ್ಲಿಯೇ ನಿನ್ನಿಂದ ಮಗನು ಹುಟ್ಟುವನು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರಬೇಕು.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಬಳಿಯಲ್ಲಿದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿವಿುತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಎಂದು ಹೇಳಲಾಗಿ


ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮ ಇಸಾಕ ಯಾಕೋಬರಿಗೆ ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡು


ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.


ಯಾವನು ಯೆಹೋವನಲ್ಲಿ ಭಯಭಕ್ತಿಯುಳ್ಳವನೋ ಅವನಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು