ಆದಿಕಾಂಡ 26:31 - ಕನ್ನಡ ಸತ್ಯವೇದವು J.V. (BSI)31 ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಇಸಾಕನು ಅವರನ್ನು ಸಾಗಕಳುಹಿಸಲು ಅವರು ಸಮಾಧಾನದೊಡನೆ ಹೊರಟುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಇಸಾಕನು ಅವರನ್ನು ಬೀಳ್ಕೊಡಲು ಅವರು ಸಮಾಧಾನದಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಮರುದಿನ ಮುಂಜಾನೆ, ಅವರು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡು, ಸಮಾಧಾನದಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಅನಂತರ ಇಸಾಕನು ಅವರನ್ನು ಸಾಗಕಳುಹಿಸಿದನು. ಅವರು ಸಮಾಧಾನದಿಂದ ಹೊರಟು ಹೋದರು. ಅಧ್ಯಾಯವನ್ನು ನೋಡಿ |
ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.