Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:34 - ಕನ್ನಡ ಸತ್ಯವೇದವು J.V. (BSI)

34 ಏಸಾವನು ನಾಲ್ವತ್ತು ವರುಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯನ ಮಗಳು ಯೆಹುದೀತಳನ್ನು ಮತ್ತು ಹಿತ್ತಿಯನಾದ ಎಲೋನನ ಮಗಳು ಬಾಸೆಮತಳನ್ನು ಮದುವೆಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಏಸಾವನಿಗೆ ನಲವತ್ತು ವರ್ಷಗಳಾಗಿದ್ದಾಗ ಅವನು ಹಿತ್ತಿಯರ ಇಬ್ಬರು ಸ್ತ್ರೀಯರನ್ನು ಮದುವೆ ಮಾಡಿಕೊಂಡನು. ಒಬ್ಬಳು ಬೇರಿಯನ ಮಗಳಾದ ಯೆಹೂದೀತಳು, ಮತ್ತೊಬ್ಬಳು ಏಲೋನನ ಮಗಳಾದ ಬಾಸೆಮತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಏಸಾವನು ನಲವತ್ತು ವರ್ಷದವನಾಗಿದ್ದಾಗ, ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತಳನ್ನೂ, ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:34
11 ತಿಳಿವುಗಳ ಹೋಲಿಕೆ  

ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡಿದ್ದನು. ಅವರು ಯಾರಾರಂದರೆ - ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ


ಅದಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಕನ್ನಿಕೆಗಳನ್ನು ತೆಗೆದುಕೊಳ್ಳುವದಕ್ಕೆ ಆಸ್ಪದವುಂಟಾಗುವದು; ತರುವಾಯ ಆ ಸೊಸೆಯರು ತೌರಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.


ರೆಗೂವೇಲನ ಮಕ್ಕಳು ಯಾರಂದರೆ - ನಹತ್, ಜೆರಹ, ಶಮ್ಮಾ, ವಿುಜ್ಜಾ. ಇವರು ಏಸಾವನ ಹೆಂಡತಿಯಾದ ಬಾಸೆಮತಳ ಸಾಲಿನವರು.


ಒಹೊಲೀಬಾಮಳು ಯೆಗೂಷನನ್ನೂ ಯಳಾಮನನ್ನೂ ಕೋರಹನನ್ನೂ ಹೆತ್ತಳು. ಕಾನಾನ್‍ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.


ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನಾದ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ತನ್ನ ಹೆಂಡರಲ್ಲಿ ಸೇರಿಸಿದನು.


ನಾನು ವಾಸವಾಗಿರುವ ಕಾನಾನ್ಯರಲ್ಲಿ ನೀನು ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳದೆ ನನ್ನ ಸ್ವದೇಶಕ್ಕೂ


ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು;


ಆದರೆ ಜಾರತ್ವವು ಪ್ರಬಲವಾಗಿರುವದರಿಂದ ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿಯು ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.


ರೆಬೆಕ್ಕಳು ಇಸಾಕನಿಗೆ - ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಯಿತು. ಯಾಕೋಬನೂ ಈ ದೇಶದವರಲ್ಲಿ ಹೆಣ್ಣನ್ನು ಆದುಕೊಂಡು ಇಂಥಾ ಹಿತ್ತಿಯ ಸ್ತ್ರೀಯನ್ನು ಮದುವೆಮಾಡಿಕೊಂಡರೆ ನಾನು ಇನ್ನೂ ಬದುಕುವದರಿಂದ ಪ್ರಯೋಜನವೇನು ಎಂದು ಹೇಳಿದಳು.


ಕಾನಾನ್ಯರ ಹೆಣ್ಣುಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ತಿಳುಕೊಂಡು


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನೂ ಕುರಿತು - ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ ಎಂದು ಕೇಳಿದ್ದಕ್ಕೆ ಅಬೀಷೈಯು - ನಾನು ಬರುತ್ತೇನೆ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು