Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:1 - ಕನ್ನಡ ಸತ್ಯವೇದವು J.V. (BSI)

1 ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ತನ್ನ ಹಿರೀ ಮಗನಾದ ಏಸಾವನನ್ನು ಕರೆದು - ಮಗನೇ ಅನ್ನಲು ಏಸಾವನು - ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮಬ್ಬಾಯಿತು. ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು, "ಮಗನೇ,” ಎನ್ನಲು ಏಸಾವನು, “ಇಗೋ, ಇಲ್ಲೇ ಇದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸಾಕನು ಮುದುಕನಾದಾಗ ಅವನಿಗೆ ಕಣ್ಣುಗಳು ಸ್ಪಷ್ಟವಾಗಿ ಕಾಣುತ್ತಿರಲಿಲ್ಲ. ಒಂದು ದಿನ ಅವನು ತನ್ನ ಹಿರಿಮಗನಾದ ಏಸಾವನನ್ನು ತನ್ನ ಬಳಿಗೆ ಕರೆದು ಅವನಿಗೆ, “ಮಗನೇ” ಅಂದನು. ಏಸಾವನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸಾಕನು ಮುದುಕನಾಗಿ ನೋಡುವುದಕ್ಕಾಗದಷ್ಟು ಅವನ ಕಣ್ಣುಗಳು ಮಬ್ಬಾದಾಗ, ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು ಅವನಿಗೆ, “ನನ್ನ ಮಗನೇ,” ಎಂದನು. ಅವನು ಇಸಾಕನಿಗೆ, “ಇದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:1
8 ತಿಳಿವುಗಳ ಹೋಲಿಕೆ  

ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬುಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.


ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಚೆನ್ನಾಗಿ ಕಾಣದೆಹೋಗಿದ್ದವು. ಅವನು ಒಂದಾನೊಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;


ಯೇಸು - ಇವನೂ ಪಾಪಮಾಡಲಿಲ್ಲ, ಇವನ ತಂದೆತಾಯಿಗಳೂ ಪಾಪಮಾಡಲಿಲ್ಲ; ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವದಕ್ಕೆ ಇದಾಯಿತು.


ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬೊಗ್ಗುವರು, ಅರೆಯುವವರು ಕೊಂಚವಾದದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.


ಯಾಕೋಬನು - ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.


ಮೋಶೆ ಸಾಯುವಾಗ ನೂರಿಪ್ಪತ್ತು ವರುಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿದ್ದದ್ದರಿಂದ ಕಾಣಿಸುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು