Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:14 - ಕನ್ನಡ ಸತ್ಯವೇದವು J.V. (BSI)

14 ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾದ ಸವಿ ಊಟವನ್ನು ಸಿದ್ಧಪಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಯಾಕೋಬನು ಹೋಗಿ ಎರಡು ಆಡುಗಳನ್ನು ತೆಗೆದುಕೊಂಡು ಬಂದನು. ಇಸಾಕನಿಗೆ ಇಷ್ಟವಾದ ರುಚಿಕರವಾದ ಪದಾರ್ಥಗಳನ್ನು ಆಕೆ ಅವುಗಳ ಮಾಂಸದಿಂದ ತಯಾರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯಾಕೋಬನು ಹೋಗಿ ಅವುಗಳನ್ನು ಹಿಡಿದು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು, ಅವನ ತಂದೆಯು ಇಷ್ಟಪಡುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:14
11 ತಿಳಿವುಗಳ ಹೋಲಿಕೆ  

ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ ನಾನು ದುಷ್ಟರೊಡನೆ ಕೂಡಿ ಕೆಟ್ಟ ಕೆಲಸಗಳನ್ನು ನಡಿಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.


ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ - ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು ಎಂದು ಹೇಳಿದನು.


ತನ್ನ ಮಗನಾದ ಯಾಕೋಬನ ಕೈಗೆ ಕೊಟ್ಟಳು.


ಆಡಿನ ಹಿಂಡಿಗೆ ಹೋಗಿ ಎರಡು ಒಳ್ಳೇ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ;


ನೀನು ಹೋಗಿ ಬೇಟೆಯಾಡಿ ಬೇಟೇ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವದಕ್ಕಿಂತ ಮುಂಚೆ ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆಂದು ಹೇಳುವದನ್ನು ಕೇಳಿದೆನು.


ಬೇಟೇ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸಿಕೊಡು; ಸಾವು ಬರುವದಕ್ಕಿಂತ ಮುಂಚೆ ನಾನು ನಿನ್ನನ್ನು ಆಶೀರ್ವದಿಸುತ್ತೇನೆ ಎಂದು ಹೇಳಿದನು.


ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದದರಿಂದ ಅವನು ಏಸಾವನನ್ನು ಪ್ರೀತಿಸಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.


ಅವನ ತಾಯಿ - ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆ ಮರಿಗಳನ್ನು ತೆಗೆದುಕೊಂಡು ಬಾ ಎಂದು ಹೇಳಲು


ಸವಿಯೂಟವನ್ನು ಸಿದ್ಧಪಡಿಸಿದ ಮೇಲೆ ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು ತನ್ನ ಕಿರೀಮಗನಾದ ಯಾಕೋಬನಿಗೆ ಹೊದ್ದಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು