ಆದಿಕಾಂಡ 27:15 - ಕನ್ನಡ ಸತ್ಯವೇದವು J.V. (BSI)15 ಸವಿಯೂಟವನ್ನು ಸಿದ್ಧಪಡಿಸಿದ ಮೇಲೆ ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು ತನ್ನ ಕಿರೀಮಗನಾದ ಯಾಕೋಬನಿಗೆ ಹೊದ್ದಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತನ್ನ ಹಿರಿಯ ಮಗ ಏಸಾವನ ಬಟ್ಟೆಗಳಲ್ಲಿ ಶ್ರೇಷ್ಠವಾದವು ಮನೆಯಲ್ಲಿ ಆಕೆಯ ವಶದಲ್ಲಿದ್ದವು. ಅವುಗಳನ್ನು ತೆಗೆದು ಕಿರಿಯ ಮಗ ಯಕೋಬನಿಗೆ ತೊಡಿಸಿದಳು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅನಂತರ ರೆಬೆಕ್ಕಳು ತನ್ನ ಹಿರಿಯ ಮಗನಾದ ಏಸಾವನಿಗೆ ಇಷ್ಟವಾದ ಉಡುಪನ್ನು ತೆಗೆದುಕೊಂಡಳು. ರೆಬೆಕ್ಕಳು ಆ ಉಡುಪನ್ನು ತನ್ನ ಕಿರಿಮಗನಾದ ಯಾಕೋಬನಿಗೆ ತೊಡಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ತರುವಾಯ ರೆಬೆಕ್ಕಳು ಮನೆಯಲ್ಲಿದ್ದ ತನ್ನ ಹಿರಿಯ ಮಗನಾದ ಏಸಾವನ ಒಳ್ಳೆಯ ವಸ್ತ್ರವನ್ನು ತೆಗೆದುಕೊಂಡು, ತನ್ನ ಕಿರಿಯ ಮಗ ಯಾಕೋಬನಿಗೆ ಉಡಿಸಿದಳು. ಅಧ್ಯಾಯವನ್ನು ನೋಡಿ |