Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:28 - ಕನ್ನಡ ಸತ್ಯವೇದವು J.V. (BSI)

28 ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂವಿುಯನ್ನೂ ಕೊಟ್ಟು ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೇವರು ನಿನಗೆ ಆಕಾಶದ ಮಂಜನ್ನೂ, ಸಾರವುಳ್ಳ ಭೂಮಿಯನ್ನೂ ಕೊಟ್ಟು ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದಯಪಾಲಿಸಲಿ ದೇವ ನಿನಗೆ ಆಗಸದ ಮಂಜನು, ಸಾರವುಳ್ಳ ಹೊಲವನು ಅನುಗ್ರಹಿಸಲಿ ಹೇರಳ ದವಸ ಧಾನ್ಯವನು, ದ್ರಾಕ್ಷಾರಸವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನು ನಿನಗೆ ಬೇಕಾದಷ್ಟು ಮಳೆಯನ್ನು ಕೊಡಲಿ; ನಿನಗೆ ಸಾರವುಳ್ಳ ಭೂಮಿಯೂ ಮಹಾಸುಗ್ಗಿಗಳೂ ಮತ್ತು ದ್ರಾಕ್ಷಾರಸವೂ ದೊರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯವನ್ನೂ ಹೊಸ ದ್ರಾಕ್ಷಾರಸವನ್ನೂ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:28
33 ತಿಳಿವುಗಳ ಹೋಲಿಕೆ  

ಆದಕಾರಣ ಇಸ್ರಾಯೇಲ್ಯರು ಆಕಾಶದಿಂದ ಮಂಜು ಸುರಿದು ಧಾನ್ಯವೂ ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬ್‍ಸಂಭವರು ಸುರಕ್ಷಿತರಾದರು.


ಯೋಸೇಫ್ ಕುಲಗಳ ವಿಷಯದಲ್ಲಿ ಹೇಳಿದ್ದೇನಂದರೆ - ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,


ಹೆರ್ಮೋನ್‍ಪರ್ವತದಲ್ಲಿ ಹುಟ್ಟಿ ಚೀಯೋನ್‍ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ ಜೀವವೂ ಸದಾಕಾಲ ಇರಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


ಗಿಲ್ಬೋವಗುಡ್ಡಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ; ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.


ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ [ತಣ್ಣಗಿರುವದು;] ನನ್ನ ಬೋಧನೆಯು ಮಂಜಿನಂತೆಯೂ ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ [ಹಿತವಾಗಿರುವದು].


ನಿಮ್ಮನ್ನು ಪ್ರೀತಿಸಿ ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ ವ್ಯವಸಾಯವನ್ನೂ ನಿಮಗಿರುವ ಧಾನ್ಯದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ನಿಮ್ಮ ದನಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.


ನೆಮ್ಮದಿಯ ಬೆಳೆಯಾಗುವದು; ದ್ರಾಕ್ಷಾಲತೆಯು ಹಣ್ಣುಬಿಡುವದು, ಭೂವಿುಯು ಧಾನ್ಯವನ್ನೀಯುವದು, ಆಕಾಶವು ಇಬ್ಬನಿಯನ್ನು ಸುರಿಸುವದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.


ಅವರ ಬಿನ್ನಹವನ್ನು ಲಾಲಿಸಿ ಅವರಿಗೆ ಹೀಗೆ ಹೇಳಿದನು - ಇಗೋ, ನಾನು ಧಾನ್ಯದ್ರಾಕ್ಷಾರಸತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ; ಅವುಗಳಿಂದ ನಿಮಗೆ ತೃಪ್ತಿಯಾಗುವದು; ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡೆನು;


ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ವರ್ಷಿಸು, ಗಗನವು ಸುರಿಸಲಿ; ಭೂವಿುಯು ಒಡೆದು ರಕ್ಷಣೆಯನ್ನು ಮೊಳೆಯಿಸಿ ಅದರೊಡನೆ ನೀತಿಫಲವನ್ನು ಬೆಳೆಯಿಸಲಿ, ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.


ಹೃದಯಾನಂದಕರವಾದ ದ್ರಾಕ್ಷಾರಸವನ್ನೂ ಮುಖಕ್ಕೆ ಕಾಂತಿಯನ್ನುಂಟುಮಾಡುವ ಎಣ್ಣೆಯನ್ನೂ ಪ್ರಾಣಾಧಾರವಾದ ರೊಟ್ಟಿಯನ್ನೂ ಸಂಪಾದಿಸಿಕೊಳ್ಳುತ್ತಾರೆ.


ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ - ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಾಣೆ, ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರುಷಗಳವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವದಿಲ್ಲ ಅಂದನು.


ಇಸ್ರಾಯೇಲ್ಯರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಅಂದರೆ ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಆಗಬೇಕೆಂದು ವಿಧಿಸಿದ್ದೇನೆ.


ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದಾಗ ಮುಂದೆ ಸಂಭವಿಸಬೇಕಾದ ಸಂಗತಿಗಳನ್ನು ಸೂಚಿಸಿದನು.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ಯೆಹೋವನ ವರವಾದ ಇಬ್ಬನಿಯೂ ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಹೇಗೆ ಮನುಷ್ಯರನ್ನು ಎದುರುನೋಡದೆ ಮಾನವರನ್ನು ನಿರೀಕ್ಷಿಸದೆ ಹಿತಕರವಾಗಿರುವವೋ ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವದು.


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ಮರಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ ಗೋದಿ, ಇಪ್ಪತ್ತು ಸಾವಿರ ಕೋರ್ ಜವೆಗೋದಿ, ಇಪ್ಪತ್ತು ಸಾವಿರ ಬತ್ ದ್ರಾಕ್ಷಾರಸ, ಇಪ್ಪತ್ತು ಸಾವಿರ ಬತ್ ಎಣ್ಣೆ ಇವುಗಳನ್ನು ಕೊಡುವೆನೆಂದು ಹೇಳಿಸಿದನು.


ಸೊಲೊಮೋನನಾದರೋ ಪ್ರತಿವರುಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋದದರಿಂದ ಅವರು ತಮ್ಮ ಭಟರೆಲ್ಲರೂ ಸಂಹಾರವಾಗುವ ತನಕ ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಅವರ ಪಿತೃಗಳಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಆಣೆಯಿಟ್ಟನು.


ಆಶೇರನಿಗೆ ಧಾನ್ಯಸಮೃದ್ಧಿಯಾಗುವದು; ಅವನಲ್ಲಿ ರಾಜಭೋಗ್ಯವಾದ ಪದಾರ್ಥಗಳು ದೊರಕುವವು.


ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರಕೊಂಡು ಬನ್ನಿರಿ; ಐಗುಪ್ತದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು, ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸಬಹುದು.


ಆದರೆ ಕೆಲವು ಕೊಂಬೆಗಳು ಮುರಿದುಹಾಕಲ್ಪಡಲು ಕಾಡೆಣ್ಣೇಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ;


ಭೂವಿುಯು ಸಾರವಾದದ್ದೋ ನಿಸ್ಸಾರವಾದದ್ದೋ, ಮರಗಳುಳ್ಳದ್ದೋ ಬೈಲೋ ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ಸಾಹಸಮಾಡಿ ತರಬೇಕೆಂದು ಬೋಧಿಸಿದನು. ಆಗ ದ್ರಾಕ್ಷಾಲತೆಗಳ ಪ್ರಥಮಫಲಕಾಲವಾಗಿತ್ತು.


ಎಂದು ಹೇಳಿ ಗೋಳಾಡುತ್ತಾ ಅಳಲು ಅವನ ತಂದೆಯಾದ ಇಸಾಕನು ಅವನಿಗೆ - ಸಾರವುಳ್ಳ ಭೂವಿುಯೂ ಮೇಲಿನಿಂದ ಬೀಳುವ ಆಕಾಶದ ಮಂಜೂ ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವದು.


ಇಸಾಕನು - ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇವಿುಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ ಅಂದನು.


ಇದು ನಿನ್ನ ತಂದೆಯ ದೇವರಿಂದಾಯಿತು, ಆತನು ನಿನಗೆ ಸಹಾಯ ಮಾಡಲಿ; ಸರ್ವಶಕ್ತನಾದ ದೇವರಿಂದಾಯಿತು,ಅತನು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಣ ಆಕಾಶದಿಂದಲೂ ಕೆಳಗಣ ಸಾಗರದ ಸೆಲೆಗಳಿಂದಲೂ ಸ್ತನ್ಯದಿಂದಲೂ ಗರ್ಭದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.


ಭೂವಿುಯ ಕೆಳಗಣ ಸಾಗರವು ಒಡೆದದ್ದಕ್ಕೂ ಆಕಾಶವು ಇಬ್ಬನಿಯನ್ನು ಸುರಿಸುವದಕ್ಕೂ ಆತನ ತಿಳುವಳಿಕೆಯೇ ಸಾಧನವು.


ರಾಜನ ರೋಷವು ಸಿಂಹದ ಗರ್ಜನೆ; ಅವನ ದಯೆಯು ಪೈರಿನ ಇಬ್ಬನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು