Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:29 - ಕನ್ನಡ ಸತ್ಯವೇದವು J.V. (BSI)

29 ಪರಜನಗಳು ನಿನ್ನನ್ನು ಸೇವಿಸಲಿ. ಪರಕುಲಗಳು ನಿನಗೆ ಅಡ್ಡಬೀಳಲಿ. ನಿನ್ನ ಅಣ್ಣತಮ್ಮಂದಿರಲ್ಲಿ ನೀನು ದೊರೆಯಾಗು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವು ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:29
40 ತಿಳಿವುಗಳ ಹೋಲಿಕೆ  

ಆ ಜನಾಂಗವು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡದೆ; ಮೃಗೇಂದ್ರನಿಗೆ ಸಮನಾದ ಆ ಜನವನ್ನು ಕೆಣಕುವದು ಯಾರಿಂದಾದೀತು. ಇಸ್ರಾಯೇಲ್ಯರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ ಶಪಿಸುವವನಿಗೆ ಶಾಪವೂ ಉಂಟಾಗುವದು ಅಂದನು.


ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಅವನು ಸಮುದ್ರದಿಂದ ಸಮುದ್ರದವರೆಗೂ [ಯೂಫ್ರೇಟೀಸ್] ನದಿಯಿಂದ ಭೂವಿುಯ ಕಟ್ಟಕಡೆಯವರೆಗೂ ಆಳಲಿ.


ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ; ಇವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.


ನಾನು ಅವರನ್ನು ಏನೆಂದು ಶಪಿಸಲಿ; ದೇವರು ಶಪಿಸಲಿಲ್ಲವಲ್ಲಾ. ಏನೆಂದು ಆಕ್ರೋಶಿಸಲಿ; ಯೆಹೋವನು ಆಕ್ರೋಶಿಸಲಿಲ್ಲವಲ್ಲಾ.


ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ನನ್ನ ಸಿವುಡು ಎದ್ದು ನಿಲ್ಲಲು ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು ಎಂದು ಹೇಳಿದನು.


ಇಸಾಕನು - ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇವಿುಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ ಅಂದನು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ಆಗ ಆತನು - ನೀವು ಈ ಕೇವಲ ಅಲ್ಪವಾದವರಲ್ಲಿ ಒಬ್ಬನಿಗೆ ಏನೇನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಪ್ರಬಲನಾದದರಿಂದಲೂ ರಾಜ್ಯಾಧಿಕಾರವು ಇವನ ಕುಲಕ್ಕೆ ಬಂದದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲನೆಂದು ಲಿಖಿತನಾಗಲಿಲ್ಲ; ಆದರೂ ಚೊಚ್ಚಲನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.


ಸೊಲೊಮೋನನು ಯೂಫ್ರೇಟೀಸ್‍ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕೊಡುತ್ತಿದ್ದರು.


ಯಾಕೋಬನು - ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.


ಯೆಫೆತನನ್ನು ದೇವರು ವಿಸ್ತರಿಸಲಿ. ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ. ಕಾನಾನನು ಅವರಿಗೆ ದಾಸನಾಗಿರಲಿ ಎಂಬದು.


ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನಣ್ಣನಾದ ಏಸಾವನು ಬೇಟೆಯಿಂದ ಬಂದನು.


ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ಕೊಸರಿಕೊಳ್ಳುವಾಗ ಅವನು ನಿನ್ನ ಹೆಗಲಿನ ಮೇಲೆ ಹಾಕಿರುವ ನೊಗವನ್ನು ಮುರಿದುಹಾಕುವಿ ಎಂದು ಹೇಳಿದನು.


ಅವನು ಈ ಕನಸನ್ನು ತನ್ನ ತಂದೆಗೂ ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ - ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬಂದೇವೋ ಎಂದು ಹೇಳಿ ಗದರಿಸಿದನು.


ಅದಲ್ಲದೆ ಎದೋಮ್ಯರ ದೇಶವನ್ನೂ ಸ್ವಾಧೀನ ಪಡಿಸಿಕೊಂಡಿದ್ದಾನೆ; ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.


ನಿನ್ನನ್ನು ಸೇವಿಸಲೊಲ್ಲದ ಜನಾಂಗ ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳೇ ಹಾಳಾಗಿ ಹೋಗುವವು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು