Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:34 - ಕನ್ನಡ ಸತ್ಯವೇದವು J.V. (BSI)

34 ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ದುಃಖಾಕ್ರಾಂತನಾಗಿ ಬಹಳ ಅಳುತ್ತಾ - ಅಪ್ಪಾ ತಂದೆಯೇ, ನನ್ನನ್ನು, ನನ್ನನ್ನು ಸಹ ಆಶೀರ್ವದಿಸು ಎಂದು ಬೇಡಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, “ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು” ಎಂದು ಬೇಡಿಕೊಳ್ಳಲು ಇಸಾಕನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ತಂದೆಯ ಈ ಮಾತುಗಳನ್ನು ಕೇಳಿ ಏಸಾವನು ದುಃಖಕ್ರಾಂತನಾದನು. ಬಹಳವಾಗಿ ಅತ್ತನು. “ಅಪ್ಪಾ, ತಂದೆಯೇ ನನ್ನನ್ನು, ನನ್ನನ್ನು ಕೂಡ ಆಶೀರ್ವದಿಸು,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ತುಂಬ ಕೋಪಗೊಂಡನು; ವ್ಯಥೆಪಟ್ಟನು; ಗೋಳಾಡಿದನು. ಅವನು ತನ್ನ ತಂದೆಗೆ, “ಹಾಗಾದರೆ, ನನ್ನನ್ನೂ ಆಶೀರ್ವದಿಸಪ್ಪಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ, ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ, “ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:34
8 ತಿಳಿವುಗಳ ಹೋಲಿಕೆ  

ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ನಡೆದದ್ದನ್ನು ಇಲ್ಲದ ಹಾಗೆ ಮಾಡುವದಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ಬಲ್ಲಿರಿ.


ಆದದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವದು.


ಅವರು ತಮ್ಮಿಂದಾಗುವಷ್ಟು ಕಾಲ ಗಟ್ಟಿಯಾಗಿ ಅತ್ತರು.


ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು ಯೆಹೋವನ ಮೇಲೆ ಕುದಿಯುವನು.


ಇಸಾಕನು - ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡಕೊಂಡನು ಅಂದನು.


ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ಬಟ್ಟೆಗಳನ್ನು ಹರಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ದುಃಖಾತಿಶಯದಿಂದ ಗೋಳಾಡಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು