ಆದಿಕಾಂಡ 27:37 - ಕನ್ನಡ ಸತ್ಯವೇದವು J.V. (BSI)37 ಇಸಾಕನು - ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇವಿುಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಆಗ ಇಸಾಕನು, “ಅವನನ್ನು ನಿನಗೆ ಒಡೆಯನನ್ನಾಗಿ ನೇಮಿಸಿದ್ದೇನೆ; ಸಹೋದರರನ್ನೇ ಅವನಿಗೆ ಕೆಲಸಗಾರರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನಿಗೆ ಬಿಟ್ಟಿದ್ದೇನೆ. ಹೀಗಿರಲು ಮಗನೇ, ನಾನು ನಿನಗೇನು ತಾನೆ ಮಾಡಲು ಸಾಧ್ಯ?” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಇಸಾಕನು, “ಇಲ್ಲ, ತುಂಬ ತಡವಾಯಿತು. ನಿನ್ನ ಮೇಲೆ ಆಡಳಿತ ಮಾಡುವ ಅಧಿಕಾರವನ್ನು ನಾನು ಯಾಕೋಬನಿಗೆ ಕೊಟ್ಟಿದ್ದೇನೆ. ಅವನ ಸಹೋದರರೆಲ್ಲ ಅವನಿಗೆ ಸೇವಕರಾಗಿರುವರು ಎಂದು ನಾನು ಹೇಳಿದ್ದೇನೆ. ಅವನಿಗೆ ಬೇಕಾದಷ್ಟು ದವಸಧಾನ್ಯಗಳೂ ದ್ರಾಕ್ಷಾರಸವೂ ದೊರೆಯುವಂತೆ ಆಶೀರ್ವಾದ ಮಾಡಿದ್ದೇನೆ. ನಿನಗೆ ಕೊಡಲು ನನ್ನಲ್ಲಿ ಏನೂ ಉಳಿದಿಲ್ಲ ಮಗನೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಇಸಾಕನು ಉತ್ತರವಾಗಿ ಏಸಾವನಿಗೆ, “ಅವನನ್ನು ನಿನಗೆ ದೊರೆಯನನ್ನಾಗಿ ನೇಮಿಸಿದ್ದೇನೆ, ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕರನ್ನಾಗಿ ಕೊಟ್ಟು, ಧಾನ್ಯದಿಂದಲೂ ಹೊಸ ದ್ರಾಕ್ಷಾರಸದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ?” ಎಂದನು. ಅಧ್ಯಾಯವನ್ನು ನೋಡಿ |