Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:4 - ಕನ್ನಡ ಸತ್ಯವೇದವು J.V. (BSI)

4 ಬೇಟೇ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸಿಕೊಡು; ಸಾವು ಬರುವದಕ್ಕಿಂತ ಮುಂಚೆ ನಾನು ನಿನ್ನನ್ನು ಆಶೀರ್ವದಿಸುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದರಿಂದ ನನಗಿಷ್ಟವಾಗಿರುವ ಸವಿಯೂಟವನ್ನೂ ಅಣಿಮಾಡಿ ಬಡಿಸು. ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಮನಸಾರೆ ಆಶೀರ್ವದಿಸುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಇಷ್ಟಪಡುವ ರುಚಿಯಾದ ಊಟವನ್ನೂ ಸಿದ್ಧಮಾಡಿ ತೆಗೆದುಕೊಂಡು ಬಾ. ಆಗ ಸಾಯುವುದಕ್ಕಿಂತ ಮುಂಚೆ ನಾನು ನಿನ್ನನ್ನು ಆಶೀರ್ವದಿಸುವಂತೆ ಅದನ್ನು ಊಟಮಾಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:4
23 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದಾಗ ಮುಂದೆ ಸಂಭವಿಸಬೇಕಾದ ಸಂಗತಿಗಳನ್ನು ಸೂಚಿಸಿದನು.


ಇವರು ಯಾರೆಂದು ಕೇಳಲು ಯೋಸೇಫನು ತನ್ನ ತಂದೆಗೆ - ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು ಎಂದು ಹೇಳಿದನು. ಅದಕ್ಕವನು - ಇವರನ್ನು ನಾನು ಆಶೀರ್ವದಿಸುತ್ತೇನೆ; ನನ್ನ ಹತ್ತಿರಕ್ಕೆ ಕರಕೊಂಡು ಬಾ ಅಂದನು.


ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಇದೇ ಅವರ ತಂದೆ ಅವರಿಗೆ ಹೇಳಿದ ಆಶೀರ್ವಾದ. ಒಂದೊಂದು ಕುಲಕ್ಕೆ ಒಂದೊಂದು ಆಶೀರ್ವಚನವನ್ನು ನುಡಿದನು.


ಇಸಾಕನು - ಆ ಪದಾರ್ಥವನ್ನು ಹತ್ತರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೇ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನೆಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತರಕ್ಕೆ ತರಲು ಅವನು ತಿಂದನು; ದ್ರಾಕ್ಷಾರಸವನ್ನು ಕೊಡಲು ಕುಡಿದನು.


ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು [ಪರಲೋಕಕ್ಕೆ ಒಯ್ಯಲ್ಪಟ್ಟನು].


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು.


ಅವರನ್ನು ಆಶೀರ್ವದಿಸಿ ಕಳುಹಿಸಿದನು.


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ಪಟ್ಟಣವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.


ನೀನು ಹೋಗಿ ಬೇಟೆಯಾಡಿ ಬೇಟೇ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವದಕ್ಕಿಂತ ಮುಂಚೆ ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆಂದು ಹೇಳುವದನ್ನು ಕೇಳಿದೆನು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ - ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು ಎಂದು ಹೇಳಿದನು.


ಅವನು ಹತ್ತರ ಬಂದು ಅವನಿಗೆ ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ನೋಡಿದಾಗ ಅವನನ್ನು ಆಶೀರ್ವದಿಸಿ - ಆಹಾ, ನನ್ನ ಮಗನ ಸುವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವದು.


ಯಾಕೋಬನ ಕೈಗಳು ಅವನ ಅಣ್ಣನ ಕೈಗಳಂತೆ ರೋಮವುಳ್ಳವುಗಳಾಗಿದ್ದದರಿಂದ ಇಸಾಕನು ಅವನ ಗುರುತನ್ನು ತಿಳಿಯಲಾರದೆ ಅವನನ್ನು ಆಶೀರ್ವದಿಸಿದನು.


ಮತ್ತು ರೆಬೆಕ್ಕಳಿಗೆ - ತಂಗಿಯೇ, ನಿನ್ನಿಂದ ಲಕ್ಷಾಂತರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿ ಎಂದು ಹೇಳಿ ಹರಸಿದರು.


ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ;


ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು.


ಆಡಿನ ಹಿಂಡಿಗೆ ಹೋಗಿ ಎರಡು ಒಳ್ಳೇ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ;


ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ


ತನ್ನ ಮಗನಾದ ಯಾಕೋಬನ ಕೈಗೆ ಕೊಟ್ಟಳು.


ಯಾಕೋಬನು ಅವನಿಗೆ - ನಾನು ನಿನ್ನ ಹಿರೀ ಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಮಾಡಿಕೊಂಡು ಬಂದಿದ್ದೇನೆ. ಎದ್ದು ಕೂತುಕೊಂಡು ನಾನು ತಂದಿರುವ ಬೇಟೇ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು ಎಂದು ಹೇಳಲು ಇಸಾಕನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು