ಆದಿಕಾಂಡ 27:40 - ಕನ್ನಡ ಸತ್ಯವೇದವು J.V. (BSI)40 ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ಕೊಸರಿಕೊಳ್ಳುವಾಗ ಅವನು ನಿನ್ನ ಹೆಗಲಿನ ಮೇಲೆ ಹಾಕಿರುವ ನೊಗವನ್ನು ಮುರಿದುಹಾಕುವಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಬಾಳ ನಡೆಸುವೆ ಕತ್ತಿಕಠಾರಿಯಿಂದಲೇ ಕೂಲಿಯಾಳಾಗುವೆ ಸೋದರನಿಗೆ ಮುರಿಯುವೆ ಅವ ಹೊರಿಸಿದ ನೊಗವ ಸ್ವಾತಂತ್ರ್ಯಕ್ಕಾಗಿ ನೀ ಬಂಡಾಯ ಹೂಡಿದಾಗ,” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ಪಾರಾಗುವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.” ಅಧ್ಯಾಯವನ್ನು ನೋಡಿ |