Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:43 - ಕನ್ನಡ ಸತ್ಯವೇದವು J.V. (BSI)

43 ಆದದರಿಂದ ಮಗನೇ, ನನ್ನ ಮಾತನ್ನು ಕೇಳು; ನೀನು ಎದ್ದು ಖಾರಾನ್ ಊರಿನಲ್ಲಿರುವ ನನ್ನಣ್ಣನಾದ ಲಾಬಾನನ ಬಳಿಗೆ ಓಡಿಹೋಗಿ ಕೆಲವು ಕಾಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆದುದರಿಂದ ಮಗನೇ, ನನ್ನ ಮಾತನ್ನು ಕೇಳು; ನೀನು ಎದ್ದು ಖಾರಾನ್ ಊರಿನಲ್ಲಿರುವ ನನ್ನ ಅಣ್ಣ ಲಾಬಾನನ ಬಳಿಗೆ ಓಡಿಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆದ್ದರಿಂದ ಮಗನೇ, ನಾನು ಹೇಳಿದಂತೆ ಮಾಡು. ನನ್ನ ಅಣ್ಣನಾದ ಲಾಬಾನನು ಹಾರಾನಿನಲ್ಲಿ ವಾಸವಾಗಿದ್ದಾನೆ. ಅವನ ಬಳಿಗೆ ಹೋಗಿ ಅಡಗಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆದ್ದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು. ಎದ್ದು ಹಾರಾನಿನಲ್ಲಿರುವ ನನ್ನ ಸಹೋದರ ಲಾಬಾನನ ಬಳಿಗೆ ಓಡಿಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:43
14 ತಿಳಿವುಗಳ ಹೋಲಿಕೆ  

ಆದದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನಪ್ಪಣೆಯಂತೆ ಮಾಡು.


ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನಗೆ ಮೊಮ್ಮಗನೂ ಹಾರಾನನಿಗೂ ಮಗನೂ ಆಗಿರುವ ಲೋಟನನ್ನೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರಕೊಂಡು ಕಾನಾನ್‍ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟನು. ಅವರು ಹಾರಾನ್ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.


ಅವನ ತಾಯಿ - ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆ ಮರಿಗಳನ್ನು ತೆಗೆದುಕೊಂಡು ಬಾ ಎಂದು ಹೇಳಲು


ಪೇತ್ರನೂ ಉಳಿದ ಅಪೊಸ್ತಲರೂ - ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು ಧಿಕ್ಕರಿಸುವವನ ಕಣ್ಣನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ಯಾಕೋಬನು ತನ್ನ ತಂದೆತಾಯಿಗಳು ಹೇಳಿದಂತೆ ಪದ್ದನ್ಅರಾವಿುಗೆ ಹೋದದ್ದನ್ನೂ ಏಸಾವನು ನೋಡಿದಾಗ


ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು.


ಯಾಕೋಬನು ಖಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.


ಹಿರೀ ಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೆದು ಅವನಿಗೆ - ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಲ್ಲಬೇಕೆಂದು ಯೋಚಿಸಿ ತನ್ನ ಹೊಟ್ಟೆಯ ಉರಿಯನ್ನು ಆರಿಸಿಕೊಳ್ಳುತ್ತಾನೆ.


ಯಾಕೋಬನು ಪದ್ದನ್ಅರಾವಿುಗೆ ಹೊರಟು ಅರಾಮ್ಯನಾದ ಬೆತೂವೇಲನ ಮಗನಾಗಿಯೂ ಯಾಕೋಬನಿಗೂ ಏಸಾವನಿಗೂ ತಾಯಿಯಾದ ರೆಬೆಕ್ಕಳ ಅಣ್ಣನಾಗಿಯೂ ಇದ್ದ ಲಾಬಾನನ ಬಳಿಗೆ ಹೋದನು.


ದೇವರು ಯಾಕೋಬನಿಗೆ - ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾಹತ್ತಿ ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ; ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು.


ಇಸಾಕನು ನಾಲ್ವತ್ತು ವರುಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳಾಗಿಯೂ ಅರಾಮ್ಯನಾದ ಲಾಬಾನನ ತಂಗಿಯಾಗಿಯೂ ಇದ್ದ ರೆಬೆಕ್ಕಳನ್ನು ಪದ್ದನ್ ಅರಾವಿುನಿಂದ ತರಿಸಿ ಹೆಂಡತಿಯಾಗಿ ಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು