Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:46 - ಕನ್ನಡ ಸತ್ಯವೇದವು J.V. (BSI)

46 ರೆಬೆಕ್ಕಳು ಇಸಾಕನಿಗೆ - ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಯಿತು. ಯಾಕೋಬನೂ ಈ ದೇಶದವರಲ್ಲಿ ಹೆಣ್ಣನ್ನು ಆದುಕೊಂಡು ಇಂಥಾ ಹಿತ್ತಿಯ ಸ್ತ್ರೀಯನ್ನು ಮದುವೆಮಾಡಿಕೊಂಡರೆ ನಾನು ಇನ್ನೂ ಬದುಕುವದರಿಂದ ಪ್ರಯೋಜನವೇನು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಅನಂತರ ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಹೆಣ್ಣುಗಳ ದೆಸೆಯಿಂದ ನನ್ನ ಬಾಳು ಬೇಸರವಾಗಿದೆ. ಯಕೋಬನು ಕೂಡ ಈ ನಾಡಿನ ಹೆಣ್ಣನ್ನು ಆರಿಸಿಕೊಂಡು ಇಂಥ ಹಿತ್ತಿಯ ಹುಡುಗಿಯನ್ನೇ ಮದುವೆಮಾಡಿಕೊಂಡರೆ ನಾನು ಇನ್ನು ಬದುಕಿ ಪ್ರಯೋಜನ ಇಲ್ಲ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನಂತರ ರೆಬೆಕ್ಕಳು ಇಸಾಕನಿಗೆ, “ನಿನ್ನ ಮಗನಾದ ಏಸಾವನು ಹಿತ್ತಿಯರ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದಾನೆ. ಆ ಸ್ತ್ರೀಯರಿಂದ ನನಗೆ ಸಾಕಾಗಿ ಹೋಗಿದೆ; ಯಾಕೆಂದರೆ ಅವರು ನಮ್ಮ ಜನರಲ್ಲ. ಯಾಕೋಬನು ಸಹ ಇಂಥ ಸ್ತ್ರೀಯರಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡರೆ ನಾನು ಸಾಯುವುದೇ ಮೇಲು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ರೆಬೆಕ್ಕಳು ಇಸಾಕನಿಗೆ, “ಹಿತ್ತಿಯ ಸ್ತ್ರೀಯರ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ. ಇಂಥ ಹಿತ್ತಿಯ ಸ್ತ್ರೀಯರಲ್ಲಿ ಒಬ್ಬಳನ್ನು ತನ್ನ ಹೆಂಡತಿಯಾಗಿ ಯಾಕೋಬನು ಮದುವೆ ಮಾಡಿಕೊಂಡರೆ, ನಾನು ಬದುಕಿರುವುದು ವ್ಯರ್ಥ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:46
11 ತಿಳಿವುಗಳ ಹೋಲಿಕೆ  

ನಾನು ವಾಸವಾಗಿರುವ ಕಾನಾನ್ಯರಲ್ಲಿ ನೀನು ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳದೆ ನನ್ನ ಸ್ವದೇಶಕ್ಕೂ


ಕಾನಾನ್ಯರ ಹೆಣ್ಣುಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ತಿಳುಕೊಂಡು


ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು ನಿನ್ನ ಕೋಪವು ಇಳಿಯುವ ಪರ್ಯಂತ ನನ್ನನ್ನು ಮರೆಮಾಡಿ ನನಗೆ ಅವಧಿಯನ್ನು ಗೊತ್ತುಮಾಡಿ [ಕಡೆಯಲ್ಲಿ] ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು!


ನಾನು ಬೇಸರಗೊಂಡಿದ್ದೇನೆ, ನಿತ್ಯವಾಗಿ ಬದುಕುವದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.


ತರುವಾಯ ತಾನೊಬ್ಬನಾಗಿ ಅರಣ್ಯದೊಳಗೆ ಒಂದು ದಿವಸದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀಗಿಡದ ಕೆಳಗೆ ಕೂತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು - ಯೆಹೋವನೇ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡು; ನಾನು ನನ್ನ ಪಿತೃಗಳಿಗಿಂತ ಉತ್ತಮನಲ್ಲ ಎಂದು ದೇವರನ್ನು ಪ್ರಾರ್ಥಿಸಿ


ನೀನು ಹೀಗೆ ಮಾಡುವದಕ್ಕಿಂತಲೂ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರ; ನನಗಾಗುವ ದುರವಸ್ಥೆಯನ್ನು ನಾನು ನೋಡಲಾರೆನು ಅಂದನು.


ಆಗ ದೇವರು ಯೋನನನ್ನು - ನೀನು ಸೋರೆಗಿಡಕ್ಕಾಗಿ ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಲು ಯೋನನು - ಮರಣವಾಗುವಷ್ಟು ಸಿಟ್ಟುಗೊಳ್ಳುವದು ಸರಿಯೇ ಎಂದು ಉತ್ತರಕೊಟ್ಟನು.


ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು