Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:1 - ಕನ್ನಡ ಸತ್ಯವೇದವು J.V. (BSI)

1 ಆಗ ಇಸಾಕನು ಯಾಕೋಬನನ್ನು ಕರೆದು ಅವನಿಗೆ - ನೀನು ಕಾನಾನ್ಯರ ಹೆಣ್ಣನ್ನು ಮದುವೆಮಾಡಿಕೊಳ್ಳಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಇಸಾಕನು ಯಕೋಬನನ್ನು ಕರೆದು, “ನೀನು ಕಾನಾನ್ಯರ ಹೆಣ್ಣನ್ನು ಮದುವೆಮಾಡಿಕೊಳ್ಳಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸಾಕನು ಯಾಕೋಬನನ್ನು ಕರೆದು ಅವನನ್ನು ಆಶೀರ್ವದಿಸಿ ಅವನಿಗೆ, “ನೀನು ಕಾನಾನಿನ ಸ್ತ್ರೀಯನ್ನು ಮದುವೆಯಾಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಆಜ್ಞಾಪಿಸಿದ್ದೇನೆಂದರೆ, “ಕಾನಾನ್ಯರ ಸ್ತ್ರೀಯರನ್ನು ನೀನು ಮದುವೆಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:1
20 ತಿಳಿವುಗಳ ಹೋಲಿಕೆ  

ನಾನು ವಾಸವಾಗಿರುವ ಕಾನಾನ್ಯರಲ್ಲಿ ನೀನು ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳದೆ ನನ್ನ ಸ್ವದೇಶಕ್ಕೂ


ರೆಬೆಕ್ಕಳು ಇಸಾಕನಿಗೆ - ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಯಿತು. ಯಾಕೋಬನೂ ಈ ದೇಶದವರಲ್ಲಿ ಹೆಣ್ಣನ್ನು ಆದುಕೊಂಡು ಇಂಥಾ ಹಿತ್ತಿಯ ಸ್ತ್ರೀಯನ್ನು ಮದುವೆಮಾಡಿಕೊಂಡರೆ ನಾನು ಇನ್ನೂ ಬದುಕುವದರಿಂದ ಪ್ರಯೋಜನವೇನು ಎಂದು ಹೇಳಿದಳು.


ಇದಲ್ಲದೆ ನನ್ನ ದಣಿಯು ನನಗೆ - ನಾನು ವಾಸವಾಗಿರುವ ಕಾನಾನ್ ದೇಶದವರಿಂದ


ದೇವಪುತ್ರರು ಮನುಷ್ಯಪುತ್ರಿಯರ ಸೌಂದರ್ಯವನ್ನು ನೋಡಿ ತಮಗೆ ಇಷ್ಟರಾದವರನ್ನು ಹೆಂಡರನ್ನಾಗಿ ಮಾಡಿಕೊಂಡರು.


ಅವರು ತಮ್ಮ ನಿವಾಸಗಳಿಗೆ ಹೋದರು. (ಮೋಶೆಯು ಮನಸ್ಸೆಕುಲದ ಅರ್ಧಜನರಿಗೆ ಬಾಷಾನಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟನು.) ಇದಲ್ಲದೆ ಯೆಹೋಶುವನು ಅವರನ್ನು ಆಶೀರ್ವದಿಸಿ ಸ್ವಸ್ಥಳಗಳಿಗೆ ಕಳುಹಿಸುವಾಗ ಅವರಿಗೆ -


ದೇವಪುರುಷನಾದ ಮೋಶೆ ದೇಹವನ್ನು ಬಿಡುವದಕ್ಕಿಂತ ಮುಂಚೆ ಇಸ್ರಾಯೇಲ್ಯರ ವಿಷಯವಾಗಿ ಹೇಳಿದ ಆಶೀರ್ವಾದವು ಹೇಗಂದರೆ -


ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಇದೇ ಅವರ ತಂದೆ ಅವರಿಗೆ ಹೇಳಿದ ಆಶೀರ್ವಾದ. ಒಂದೊಂದು ಕುಲಕ್ಕೆ ಒಂದೊಂದು ಆಶೀರ್ವಚನವನ್ನು ನುಡಿದನು.


ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರು ಸೇವಿಸಿದ ದೇವರಾಗಿಯೂ ನನ್ನನ್ನು ಚಿಕ್ಕಂದಿನಿಂದ ಈ ದಿನದವರೆಗೂ ಪರಾಂಬರಿಸುತ್ತಾ ಬಂದ ದೇವರಾಗಿಯೂ


ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪಿ ನಮ್ಮ ಹೆಣ್ಣು ಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು.


ಇದಲ್ಲದೆ ನೀವು ನಮ್ಮಲ್ಲೇ ವಾಸವಾಗಿದ್ದು ನಿಮ್ಮ ಹೆಣ್ಣು ಮಕ್ಕಳನ್ನು ನಮಗೆ ಕೊಡುತ್ತಾ ನಮ್ಮ ಹೆಣ್ಣುಮಕ್ಕಳನ್ನು ನೀವು ತೆಗೆದುಕೊಳ್ಳುತ್ತಾ ಬೀಗರಾಗಿರಬೇಕು.


ಬೇಟೇ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸಿಕೊಡು; ಸಾವು ಬರುವದಕ್ಕಿಂತ ಮುಂಚೆ ನಾನು ನಿನ್ನನ್ನು ಆಶೀರ್ವದಿಸುತ್ತೇನೆ ಎಂದು ಹೇಳಿದನು.


ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತೆಗೆದುಕೊಳ್ಳಬೇಕು. ಹಾಗೆ ತೆಗೆದುಕೊಳ್ಳುತ್ತೇನೆಂಬದಕ್ಕೆ ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಭೂಲೋಕಪರಲೋಕಗಳ ದೇವರಾಗಿರುವ ಯೆಹೋವನ ಮೇಲೆ ಪ್ರಮಾಣಮಾಡಬೇಕು ಎಂದು ಹೇಳಿದನು.


ಇಸಾಕನು ಯಾಕೋಬನನ್ನು ಆಶೀರ್ವದಿಸಿ ಪದ್ದನ್ಅರಾವಿುನಲ್ಲಿ ಹೆಣ್ಣನ್ನು ತೆಗೆದುಕೊಳ್ಳುವದಕ್ಕೆ ಕಳುಹಿಸಿದ್ದನ್ನೂ ಅವನು ಯಾಕೋಬನನ್ನು ಆಶೀರ್ವದಿಸುವಾಗ ಅವನಿಗೆ - ನೀನು ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬೇಡವೆಂದು ಅಪ್ಪಣೆಕೊಟ್ಟದ್ದನ್ನೂ


ಅಲ್ಲಿ ಅವನು ಶೂಗನೆಂದು ಹೆಸರುಳ್ಳ ಒಬ್ಬ ಕಾನಾನ್ಯನ ಮಗಳನ್ನು ಕಂಡು ಅವಳನ್ನು ವರಿಸಿ ಅವಳ ಸಹವಾಸ ಮಾಡಿದನು.


ಸಂಸಾರಿಗಳಾಗಿ ಗಂಡುಹೆಣ್ಣು ಮಕ್ಕಳನ್ನು ಪಡೆಯಿರಿ; ನಿಮ್ಮ ಗಂಡುಗಳಿಗೆ ಹೆಣ್ಣುಗಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಗಳನ್ನು ಗಂಡುಗಳಿಗೆ ಕೊಡಿರಿ; ಅವರೂ ಗಂಡು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕಡಿಮೆಯಾಗದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು