Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:13 - ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:13
40 ತಿಳಿವುಗಳ ಹೋಲಿಕೆ  

ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಯಾಕೋಬನು ಯೋಸೇಫನಿಗೆ - ಸರ್ವಶಕ್ತನಾದ ದೇವರು ಕಾನಾನ್‍ದೇಶದ ಲೂಜಿನಲ್ಲಿ ನನಗೆ ದರ್ಶನಕೊಟ್ಟು ಆಶೀರ್ವದಿಸಿ -


ನಾನು ಅಬ್ರಹಾಮ್ ಇಸಾಕರಿಗೆ ವಾಗ್ದಾನಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು ಎಂದು ಹೇಳಿ


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಬಳಿಯಲ್ಲಿದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿವಿುತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಎಂದು ಹೇಳಲಾಗಿ


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ದೇವರು ಯಾಕೋಬನಿಗೆ - ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾಹತ್ತಿ ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ; ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು.


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ದೇವರು ನಿಮಗೆ ನುಡಿದದ್ದನ್ನು ನೀವು ಓದಲಿಲ್ಲವೇ. ಆತನು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ ಎಂದು ಹೇಳಿದನು.


ಆತನು - ನಾನು ದೇವರು, ನಿನ್ನ ತಂದೆ ಆರಾಧಿಸಿದ ದೇವರು; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾಜನಾಂಗವುಂಟಾಗುವಂತೆ ಮಾಡುವೆನು.


ಆಕೆ ಹೆರಿಗೆಯ ಬೇನೆಯಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ - ಅಂಜಬೇಡ; ಇನ್ನೊಂದು ಗಂಡು ಮಗುವು ಹುಟ್ಟುವದಲ್ಲಾ ಎಂದು ಹೇಳಿದಳು.


ಇದಲ್ಲದೆ ಅವನು ದೇವರನ್ನು ಪ್ರಾರ್ಥಿಸಿ - ಯೆಹೋವನೇ, ನನ್ನ ತಂದೆತಾತಂದಿರಾದ ಇಸಾಕ ಅಬ್ರಹಾಮರ ದೇವರೇ, ಸ್ವದೇಶಕ್ಕೆ ಬಂಧುಗಳ ಬಳಿಗೆ ತಿರಿಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೇದನ್ನು ಮಾಡುವೆನೆಂದು ನನಗೆ ವಾಗ್ದಾನ ಮಾಡಿದವನು ನೀನೇ ಅಲ್ಲವೇ.


ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.


ಆತನು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಟ್ಟು ತಾನು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದೂ ನೀನು ಪ್ರವಾಸವಾಗಿರುವಂಥದೂ ಆಗಿರುವ ಈ ದೇಶವನ್ನು ನೀನು ಬಾಧ್ಯನಾಗಿ ಹೊಂದುವಂತೆ ಮಾಡಲಿ ಎಂದು ಹೇಳಿ ಆಶೀರ್ವದಿಸಿ ಕಳುಹಿಸಿಬಿಟ್ಟನು.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ಇದರಲ್ಲಿ ಅವನಿಗೆ ಕಾಲಿಡುವಷ್ಟು ಭೂವಿುಯನ್ನು ಸ್ವಾಸ್ತ್ಯವಾಗಿ ಕೊಡದೆ ಅವನಿಗೆ ಮಕ್ಕಳು ಇನ್ನೂ ಇಲ್ಲದಿರುವಾಗ - ಈ ದೇಶವನ್ನು ನಿನಗೂ ನಿನ್ನ ಹಿಂದೆ ಬರುವ ನಿನ್ನ ಸಂತತಿಗೂ ಸ್ವಾಸ್ತ್ಯವಾಗಿ ಕೊಡುವೆನು ಎಂದು ಅವನಿಗೆ ವಾಗ್ದಾನ ಮಾಡಿದನು.


ಅವರು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್‍ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ


ಅವನು ತನ್ನ ಸಂಗಡ ದೇವರು ಮಾತಾಡಿದ ಸ್ಥಳಕ್ಕೆ ಬೇತೇಲೆಂದು ಹೆಸರಿಟ್ಟನು.


ನೀನೆದ್ದು ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು ಎಂದು ಹೇಳಿದನು.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;


ಅವರಿಗೆ ಹೇಳಿದ್ದೇನಂದರೆ - ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.


ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ; ಅಲ್ಲಿ ಕಂಬದ ಮೇಲೆ ಎಣ್ಣೆಹೊಯಿದು ನನಗೆ ಹರಕೆ ಮಾಡಿಕೊಂಡಿಯಷ್ಟೆ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೆ ತಿರಿಗಿಹೋಗು ಎಂದು ಹೇಳಿದನು.


ಅಬ್ರಹಾಮ ನಾಹೋರರ ದೇವರು ಅಂದರೆ ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದನು. ಅದೇ ಮೇರೆಗೆ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.


ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮ ಇಸಾಕ ಯಾಕೋಬರಿಗೆ ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡು


ಆಗ ಯೆಹೋವನು ಅವನಿಗೆ - ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನಿನಗೆ ಕಾಣಿಸಿದ್ದು ನಿಜ ಎಂಬದನ್ನು ನಂಬುವರು ಎಂದು ಹೇಳಿದನು.


ನಾನು ಅವರಿಗೆ - ನೀವು ಪ್ರವಾಸವಾಗಿರುವ ಕಾನಾನ್ ದೇಶವನ್ನು ನಿಮಗೇ ಕೊಡುವೆನೆಂಬದಾಗಿ ದೃಢವಾಗಿ ವಾಗ್ದಾನ ಮಾಡಿದೆನಷ್ಟೆ.


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ಹೊಳೆದಾಟಿ ಅಲ್ಲಿಗೆ ಹೋಗಕೂಡದೆಂದು ಹೇಳಿದನು.


ಕರ್ತನು ಮತ್ತೊಂದನ್ನು ನನಗೆ ತೋರಿಸಿದನು - ಇಗೋ, ಆತನು ನೂಲುಮಟ್ಟದ ಗೋಡೆಯ ಮೇಲೆ ನಿಂತಿದ್ದನು; ಆತನ ಕೈಯಲ್ಲಿ ನೂಲುಗುಂಡಿತ್ತು.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಪಾತ್ರನಾಗಿದ್ದೇನೆ. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಪಾಳೆಯಗಳಿಗೆ ಒಡೆಯನಾಗಿದ್ದೇನೆ.


ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.


ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.


ನೀವು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್ ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು