Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:15 - ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಗೋ, ನಾನು ನಿನ್ನ ಸಂಗಡ ಇದ್ದು, ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಈ ದೇಶಕ್ಕೆ ನಿನ್ನನ್ನು ತಿರುಗಿ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವವರೆಗೆ ನಿನ್ನನ್ನು ಬಿಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:15
48 ತಿಳಿವುಗಳ ಹೋಲಿಕೆ  

ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನು.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು.


ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಬಳಿಯಲ್ಲಿದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿವಿುತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಎಂದು ಹೇಳಲಾಗಿ


ಮತ್ತು ಯೆಹೋವನು ಅವನಿಗೆ - ನಿನ್ನ ತಂದೆತಾತಂದಿರ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು; ನಾನು ನಿನ್ನೊಂದಿಗೆ ಇರುವೆನು ಎಂದು ಹೇಳಿದನು.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ನಮ್ಮ ದೇವರಾದ ಯೆಹೋವನು ನಮ್ಮ ಪಿತೃಗಳ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ; ಆತನು ನಮ್ಮನ್ನು ಕೈಬಿಡದಿರಲಿ, ತಳ್ಳದಿರಲಿ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ಇಸ್ರಾಯೇಲನು ಯೋಸೇಫನಿಗೆ - ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ದೇಶಕ್ಕೆ ತಿರಿಗಿ ಬರಮಾಡುವನು.


ಆಲೋಚನೆಮಾಡಿಕೊಳ್ಳಿರಿ, ಅದು ಮುರಿದುಹೋಗುವದು; ಅಪ್ಪಣೆಮಾಡಿರಿ, ಅದು ನಿಲ್ಲದು; ದೇವರು ನಮ್ಮ ಕೂಡ ಇದ್ದಾನಷ್ಟೆ.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಯೆಹೋವನು ಅವನಿಗೆ - ನಾನು ನಿನ್ನ ಸಂಗಡ ಇರುವದರಿಂದ ನೀನು ವಿುದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ ಅಂದನು.


ಯೇಸು ಕ್ರಿಸ್ತನ ದಾಸನೂ ಯಾಕೋಬನ ತಮ್ಮನೂ ಆಗಿರುವ ಯೂದನು ತಂದೆಯಾದ ದೇವರಲ್ಲಿ ಪ್ರಿಯರಾದವರೂ ಯೇಸು ಕ್ರಿಸ್ತನಿಗಾಗಿ ಕಾಯಲ್ಪಟ್ಟವರೂ ಆಗಿರುವವರಿಗೆ ಬರೆಯುವದೇನಂದರೆ -


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಆದರೂ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕೃಪೆಯನ್ನಿಟ್ಟು ಅವನಿಗೆ ಸೆರೆಯಜಮಾನನ ಬಳಿಯಲ್ಲಿ ದಯೆದೊರಕುವಂತೆ ಮಾಡಿದನು.


ಯೆಹೋವನು ಯೋಸೇಫನ ಸಂಗಡ ಇದ್ದದರಿಂದ ಅವನು ಏಳಿಗೆಯಾಗಿ ಐಗುಪ್ತ್ಯನಾದ ತನ್ನ ದಣಿಯ ಮನೆಯೊಳಗೆ ಸೇವಕನಾದನು.


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.


ಇದಲ್ಲದೆ ಅವನು ದೇವರನ್ನು ಪ್ರಾರ್ಥಿಸಿ - ಯೆಹೋವನೇ, ನನ್ನ ತಂದೆತಾತಂದಿರಾದ ಇಸಾಕ ಅಬ್ರಹಾಮರ ದೇವರೇ, ಸ್ವದೇಶಕ್ಕೆ ಬಂಧುಗಳ ಬಳಿಗೆ ತಿರಿಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೇದನ್ನು ಮಾಡುವೆನೆಂದು ನನಗೆ ವಾಗ್ದಾನ ಮಾಡಿದವನು ನೀನೇ ಅಲ್ಲವೇ.


ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ತಿರಿಗಿ ಕರೆದುಕೊಂಡು ಬರುವೆನು; [ನಿನ್ನ ಅವಸಾನಕಾಲದಲ್ಲಿ] ಯೋಸೇಫನು ನಿನ್ನ ಕಣ್ಣುಗಳ ಮೇಲೆ ಕೈಯಿಡುವನು ಅಂದನು.


ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.


ಅವರಿಗೆ ಹೇಳಿದ್ದೇನಂದರೆ - ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.


ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ; ಅಲ್ಲಿ ಕಂಬದ ಮೇಲೆ ಎಣ್ಣೆಹೊಯಿದು ನನಗೆ ಹರಕೆ ಮಾಡಿಕೊಂಡಿಯಷ್ಟೆ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೆ ತಿರಿಗಿಹೋಗು ಎಂದು ಹೇಳಿದನು.


ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ ಎಂದು ಹೇಳಿದನು.


ಯೆಹೋವನು ತಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಪ್ರಮಾಣವಚನದ ಮೇರೆಗೆ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ


ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ;


ಆದದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ


ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ನಿಮ್ಮನ್ನು ಕನಿಕರಿಸಿ ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ತಿರಿಗಿ ಕೂಡಿಸುವನು.


ಯೆಹೋವನು ತಾನೇ ನಿನ್ನ ಮುಂದುಗಡೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವದೇ ಇಲ್ಲ, ಕೈಬಿಡುವದಿಲ್ಲ; ಅಂಜಬೇಡ, ಧೈರ್ಯದಿಂದಿರು ಎಂದು ಹೇಳಿದನು.


ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ - ನನಗೆ ಅಪ್ಪಣೆ ಕೊಡಬೇಕು; ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಬೇಕು.


ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.


ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತ ದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು.


ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.


ಇಸ್ರಾಯೇಲ್ಯರನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ನಾನು ಅವರ ಪಿತೃಗಳಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು