ಆದಿಕಾಂಡ 28:17 - ಕನ್ನಡ ಸತ್ಯವೇದವು J.V. (BSI)17 ಅದು ನನಗೆ ತಿಳಿಯದೆ ಹೋಯಿತು ಅಂದುಕೊಂಡು ಭಯಪಟ್ಟವನಾಗಿ - ಈ ಸ್ಥಳವು ಎಷ್ಟೋ ಭಯಂಕರವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದು ಪರಲೋಕದ ಬಾಗಿಲು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಲ್ಲದೆ ಭಯಭಕ್ತಿಯಿಂದ, “ಇದು ಮಹಾಗಂಭೀರವಾದ ಸ್ಥಳ; ದೇವರ ಸ್ಥಾನವೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು!” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯಾಕೋಬನಿಗೆ ಭಯವಾಗಿತ್ತು. ಅವನು, “ಇದು ತುಂಬ ಮಹತ್ವವಾದ ಸ್ಥಳ. ಇದು ದೇವರ ಮನೆ. ಇದು ಸ್ವರ್ಗಕ್ಕೆ ಬಾಗಿಲು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ಭಯಪಟ್ಟು, “ಈ ಸ್ಥಳವು ಎಷ್ಟೋ ಗಂಭೀರವಾದದ್ದು, ಇದು ದೇವರ ಮನೆಯೇ ಹೊರತು ಬೇರೆಯಲ್ಲ. ಇದೇ ಪರಲೋಕದ ಬಾಗಿಲು,” ಎಂದನು. ಅಧ್ಯಾಯವನ್ನು ನೋಡಿ |