Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:18 - ಕನ್ನಡ ಸತ್ಯವೇದವು J.V. (BSI)

18 ಹೊತ್ತಾರೆ ಅವನು ಎದ್ದಾಗ ತಾನು ತಲೆಗಿಂಬಿಗೆ ಇಟ್ಟುಕೊಂಡಿದ್ದ ಕಲ್ಲನ್ನು ಕಂಬವಾಗಿ ನಿಲ್ಲಿಸಿ ಅದರ ತುದಿಯಲ್ಲಿ ಎಣ್ಣೇ ಹೊಯಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಕೋಬನು ಬೆಳಗಿನ ಜಾವದಲ್ಲಿ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಆ ಕಲ್ಲನ್ನು ಸ್ಮಾರಕಸ್ತಂಭವಾಗಿ ನೆಟ್ಟನು. ಅದರ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಕೋಬನು ಮರುದಿನ ಮುಂಜಾನೆ ಬೇಗನೆ ಎದ್ದು, ತಾನು ಮಲಗಿಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಕಂಬವಾಗಿ ನೆಲದಲ್ಲಿ ನಿಲ್ಲಿಸಿದನು. ನಂತರ ಆ ಕಲ್ಲಿನ ಮೇಲೆ ಎಣ್ಣೆಯನ್ನು ಸುರಿದನು. ಹೀಗೆ ಅವನು ಆ ಕಲ್ಲನ್ನು ದೇವರ ನೆನಪಿಗಾಗಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾಕೋಬನು ಬೆಳಿಗ್ಗೆ ಎದ್ದು, ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು, ಅದನ್ನು ಸ್ತಂಭವಾಗಿ ನೆಟ್ಟು, ಅದರ ಮೇಲೆ ಎಣ್ಣೆಯನ್ನು ಹೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:18
16 ತಿಳಿವುಗಳ ಹೋಲಿಕೆ  

ಯಾಕೋಬನು ತನ್ನ ಸಂಗಡ ದೇವರು ಮಾತಾಡಿದ ಸ್ಥಳದಲ್ಲಿ ಕಲ್ಲಿನ ಕಂಬವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೇ ಹೊಯಿದನು.


ಆಗ ಯಾಕೋಬನು ಕಲ್ಲನ್ನು ತೆಗೆದುಕೊಂಡು ಕಂಬವಾಗಿ ನಿಲ್ಲಿಸಿದನು.


ಯಾಕೋಬನು ಆಕೆಯ ಸಮಾಧಿಯ ಮೇಲೆ ಕಂಬವನ್ನು ನಿಲ್ಲಿಸಿದನು; ಅದು ಇಂದಿನವರೆಗೂ ರಾಹೇಲಳ ಸಮಾಧಿಸ್ತಂಭವೆನಿಸಿಕೊಳ್ಳುತ್ತದೆ.


ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ; ಅಲ್ಲಿ ಕಂಬದ ಮೇಲೆ ಎಣ್ಣೆಹೊಯಿದು ನನಗೆ ಹರಕೆ ಮಾಡಿಕೊಂಡಿಯಷ್ಟೆ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೆ ತಿರಿಗಿಹೋಗು ಎಂದು ಹೇಳಿದನು.


ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಯೆಹೋವನಿಗೆ ಒಂದು ಯಜ್ಞಪೀಠವೂ ದೇಶದ ಎಲ್ಲೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವವು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ನಿನ್ನ ಆಜ್ಞೆಗಳನ್ನು ಅನುಸರಿಸುವದರಲ್ಲಿ ಆಸಕ್ತನಾದೆನು; ಆಲಸ್ಯಮಾಡಲಿಲ್ಲ.


ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ ತನ್ನ ಹೆಸರನ್ನುಳಿಸುವ ಮಗನಿಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ ಅದಕ್ಕೆ ತನ್ನ ಹೆಸರನ್ನಿಟ್ಟನು. ಅದು ಇಂದಿನವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭವೆಂದೆನಿಸಿಕೊಳ್ಳುತ್ತದೆ.


ಅನಂತರ ಸಮುವೇಲನು ವಿುಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ - ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದನೆಂದು ಹೇಳಿ ಅದಕ್ಕೆ ಎಬೆನೆಜೆರೆಂದು ಹೆಸರಿಟ್ಟನು.


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ ಅದರ ಸಾಮಾನುಗಳನ್ನೂ ಯಜ್ಞವೇದಿಯನ್ನೂ ವೇದಿಯ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದಾಗ


ಬೆಳಿಗ್ಗೆ ಅಬ್ರಹಾಮನು ಎದ್ದು ಕತ್ತೆಗೆ ತಡಿಹಾಕಿಸಿ ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡಿಸಿ ತನ್ನ ಸೇವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಅವನು ಹೋಗುತ್ತಿರಲು ಒಂದು ಸ್ಥಳಕ್ಕೆ ಸೇರಿದಾಗ ಹೊತ್ತು ಮುಣುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆಗಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇರುತ್ತವೆ.


ಮಾರಣೇ ದಿನ ಬೆಳಿಗ್ಗೆ ಅಬ್ರಹಾಮನು ಎದ್ದು ಹಾಗರಳಿಗೆ ಬುತ್ತಿಯನ್ನೂ ಒಂದು ತಿತ್ತಿ ತಣ್ಣೀರನ್ನೂ ಕೊಟ್ಟು ಅವಳ ಹೆಗಲಿನ ಮೇಲೆ ಇಟ್ಟು ಮಗುವನ್ನು ಒಪ್ಪಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು