ಆದಿಕಾಂಡ 28:22 - ಕನ್ನಡ ಸತ್ಯವೇದವು J.V. (BSI)22 ಮತ್ತು ನಾನು ಕಂಬವಾಗಿ ನಿಲ್ಲಿಸಿರುವ ಈ ಕಲ್ಲು ದೇವರ ಮನೆಯಾಗುವದು. ಇದಲ್ಲದೆ ನಿನ್ನಿಂದ ನನಗೆ ಬರುವ ಎಲ್ಲಾ ಆಸ್ತಿಯಲ್ಲಿ ಹತ್ತರಲ್ಲೊಂದು ಪಾಲನ್ನು ನಿನಗೆ ಸಮರ್ಪಿಸುವೆನೆಂಬದಾಗಿ ಮಾತುಕೊಡುತ್ತೇನೆ ಎಂದು ಹರಕೆಮಾಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಾನು ಸ್ಮಾರಕಸ್ತಂಭವಾಗಿ ನೆಟ್ಟಿರುವ ಈ ಕಲ್ಲು ದೇವರ ಮನೆಯಾಗುವುದು; ಅದು ಮಾತ್ರವಲ್ಲ, ನೀವು ನನಗೆ ಕೊಡುವ ಎಲ್ಲ ಆಸ್ತಿಪಾಸ್ತಿಯಲ್ಲಿ ಹತ್ತರಲ್ಲಿ ಒಂದು ಪಾಲನ್ನು ನಿಮಗೆ ಸಮರ್ಪಿಸುತ್ತೇನೆಂದು ಮಾತುಕೊಡುತ್ತೇನೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು. ಅಧ್ಯಾಯವನ್ನು ನೋಡಿ |