ಆದಿಕಾಂಡ 29:10 - ಕನ್ನಡ ಸತ್ಯವೇದವು J.V. (BSI)10 ಯಾಕೋಬನು ತನ್ನ ಸೋದರಮಾವನಾದ ಲಾಬಾನನ ಮಗಳಾಗಿರುವ ರಾಹೇಲಳನ್ನೂ ತನ್ನ ಸೋದರಮಾವನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ತನ್ನ ಸೋದರಮಾವನ ಕುರಿಗಳಿಗೆ ನೀರು ಕುಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ತನ್ನ ಸೋದರಮಾವ ಲಾಬಾನನ ಮಗಳಾದ ಆ ರಾಖೇಲಳನ್ನೂ ಅವನ ಕುರಿಗಳನ್ನೂ ಕಂಡ ಕೂಡಲೆ ಯಕೋಬನು ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲಿದ್ದ ಕಲ್ಲನ್ನು ಸರಿಸಿ ಸೋದರಮಾವನ ಆ ಕುರಿಗಳಿಗೆ ನೀರು ಕುಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ರಾಹೇಲಳು ಲಾಬಾನನ ಮಗಳು. ಲಾಬಾನನು ಯಾಕೋಬನ ತಾಯಿಯಾದ ರೆಬೆಕ್ಕಳ ಅಣ್ಣ. ಯಾಕೋಬನು ರಾಹೇಲಳನ್ನು ನೋಡಿದಾಗ ಬಾವಿಯ ಮೇಲಿದ್ದ ಕಲ್ಲನ್ನು ತೆಗೆದುಹಾಕಿ ತನ್ನ ತಾಯಿಯ ಅಣ್ಣನಾದ ಲಾಬಾನನ ಕುರಿಗಳಿಗೆ ನೀರು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯಾಕೋಬನು ತನ್ನ ತಾಯಿಯ ಸಹೋದರ ಲಾಬಾನನ ಮಗಳಾದ ರಾಹೇಲಳನ್ನೂ, ಅವಳ ಕುರಿಗಳನ್ನೂ ನೋಡಿದಾಗ, ಯಾಕೋಬನು ಹತ್ತಿರ ಬಂದು, ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ, ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು. ಅಧ್ಯಾಯವನ್ನು ನೋಡಿ |