Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:13 - ಕನ್ನಡ ಸತ್ಯವೇದವು J.V. (BSI)

13 ಲಾಬಾನನು ತನ್ನ ಸೋದರಳಿಯನು ಬಂದ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರಕೊಂಡು ಬಂದನು. ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಲಾಬಾನನು ತನ್ನ ಸೋದರಳಿಯ ಬಂದ ಸುದ್ದಿಯನ್ನು ಕೇಳಿ ಅವನನ್ನು ಎದುರುಗೊಳ್ಳಲು ಓಡಿಬಂದನು. ಯಕೋಬನನ್ನು ಅಪ್ಪಿಕೊಂಡು ಮುದ್ದಿಟ್ಟು, ಮನೆಗೆ ಕರೆದುಕೊಂಡು ಹೋದನು. ನಡೆದ ಸಂಗತಿಗಳನ್ನೆಲ್ಲ ಯಕೋಬನು ಲಾಬಾನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:13
12 ತಿಳಿವುಗಳ ಹೋಲಿಕೆ  

ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು.


ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳೆಲ್ಲಾ ನಿಮ್ಮನ್ನು ವಂದಿಸುತ್ತವೆ.


ನೀವು ಇನ್ನು ಮೇಲೆ ನನ್ನ ಮುಖವನ್ನು ಕಾಣುವದಿಲ್ಲವೆಂದು ಪೌಲನು ಹೇಳಿದ ಮಾತಿಗೆ ಅವರು ವಿಶೇಷವಾಗಿ ವ್ಯಥೆಪಟ್ಟು ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. ಆಮೇಲೆ ಅವರು ಅವನನ್ನು ಹಡಗಿಗೆ ಸಾಗಕಳುಹಿಸಿದರು.


ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವದನ್ನು ಬಿಟ್ಟಿಲ್ಲ.


ಎಲ್ಲಾ ಜನರೂ ಹೊಳೆದಾಟಿದರು. ಅರಸನು ಹೊಳೆದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.


ಅವನು ತನ್ನ ಮಾವನನ್ನು ಎದುರುಗೊಳ್ಳುವದಕ್ಕೆ ಹೊರಟು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಕ್ಕೆ ಬಂದರು.


ಇದಲ್ಲದೆ ಯೆಹೋವನು ಆರೋನನಿಗೆ - ನೀನು ಮೋಶೆಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೊರಟುಹೋಗು ಎಂದು ಹೇಳಲಾಗಿ ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.


ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತಾಡಿದರು.


ಸಮಯವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಬಂದಾಗ ಅವನಿಗೆ - ಯೆಹೋವನ ದಯೆಯನ್ನು ಹೊಂದಿದವನೇ, ಒಳಕ್ಕೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಎಂದು ಹೇಳಿದನು.


ಆದರೆ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಕಣ್ಣೀರು ಸುರಿಸಿದರು.


ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡಿದ್ದವರ ಕಾಲುಗಳನ್ನು ತೊಳೆಯುವದಕ್ಕೆ ನೀರನ್ನು ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು